ಯಾವ ಪಕ್ಷದಲ್ಲೂ ಮಹಿಳೆಗೆ ಅವಕಾಶವಿಲ್ಲ: ವಿಷಾದ
ಕ.ಪ್ರ.ವಾರ್ತೆ, ಶಿವಮೊಗ್ಗ, ಏ.27 ದೇಶದ ಯಾವುದೇ ರಾಜಕೀಯ ಪಕ್ಷಗಳೂ ರಾಜಕೀಯವಾಗಿ ಮಹಿಳೆಗೆ ಹೆಚ್ಚಿನ ಅವಕಾಶ ಕೊಟ್ಟ ಉದಾಹರಣೆಯೇ ಇಲ್ಲ. ಆದ್ದರಿಂದ ನಾನು ನನ್ನ ಸ್ನೇಹಿತರು, ಅಭಿಮಾನಿಗಳ ಒತ್ತಾಯದ ಮೇರೆಗೆ ಪಕ್ಷೇತರವಾಗಿ ಸ್ಪರ್ಧೆಯಲ್ಲಿದ್ದೇನೆ ಎಂದು ಶಿವಮೊಗ್ಗ ನಗರ ವಿಧಾನಸಭಾಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಉಷಾ ಜಯರಾಜ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಹಾಗೂ ಹಿಂದಿನ ಸರ್ಕಾರಗಳು ಸಾಮಾನ್ಯ ಜನರಿಗೆ ಬೇಕಾಗುವ ಮೂಲ ಸೌಲಭ್ಯ ಒದಗಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ನಗರದಲ್ಲಿ ಆಟದ ಮೈದಾನ ಮತ್ತು ಪಾರ್ಕ್ಗಳ ಕೊರತೆ ಇದೆ. ಇರುವುದು ಸರಿಯಾಗಿ ನಿರ್ವಹಿಸುತ್ತಿಲ್ಲ. ಶುದ್ಧ ಕುಡಿಯುವ ನೀರಿನ ಸಮಸ್ಯೆಯೂ ತಾಂಡವವಾಡುತ್ತಿದೆ. ಒಳಚರಂಡಿ ವ್ಯವಸ್ಥೆ ಸರಿ ಇಲ್ಲ ಎಂದು ಟೀಕಿಸಿದರು.
ಕಾಲಹರಣ: ಇವರೆಲ್ಲಾ ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತದಲ್ಲೇ ಕಾಲಹರಣ ಮಾಡುತ್ತಿದ್ದಾರೆಯೇ ಹೊರತು, ಅಭಿವೃದ್ಧಿ ಯೋಜನೆಗಳತ್ತ ಕಿಂಚಿತ್ತೂ ಗಮನ ಹರಿಸುತ್ತಿಲ್ಲ. ಬದಲಾಗಿ ತಾವು ಮಾತ್ರ ವೈಯಕ್ತಿಕವಾಗಿ ತಮ್ಮ ಸಂಪತ್ತು ಹೆಚ್ಚಿಸಿಕೊಳ್ಳುತ್ತಿದ್ದಾರೆ ಎಂದರು.
ಮುಂದಿನ ದಿನಗಳಲ್ಲಿ ರಾಜಕೀಯ ಶಕ್ತಿ ದೊರಕಿದರೆ ಇನ್ನಷ್ಟು ಹೆಚ್ಚಿನ ಸಮಾಜ ಸೇವೆ ಮಾಡುವುದು ನನ್ನ ಗುರಿ ಎಂದರು.
ನಗರದ ಶೇ.75ರಷ್ಟು ಮತದಾರರನ್ನು ಭೇಟಿ ಮಾಡಿದ್ದು, ಎಲ್ಲರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ಸಂದರ್ಭ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ವೆಂಕಟರಾಮ್, ಜಿ.ಎಸ್. ಚೋಳರಾಜ್, ಗಾಯತ್ರಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

