ನಾಳೆಯಿಂದ ರಾಜ್ಯ ಅಥ್ಲೆಟಿಕ್ ಕ್ರೀಡಾಕೂಟ
ಶಿವಮೊಗ್ಗ: ನಗರದ ನೆಹರೂ ಕ್ರೀಡಾಂಗಣದಲ್ಲಿ 25ನೇ ರಾಜ್ಯ ಅಥ್ಲೆಟಿಕ್ ಕ್ರೀಡಾಕೂಟ ಆಗಸ್ಟ್ 3ರಿಂದ 5ರವರೆಗೆ ನಡೆಯುವುದು. ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಕಾರ್ಯದರ್ಶಿ ಉದಯಕುಮಾರ್, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ಸ್ ಸಂಸ್ಥೆ ಆಶ್ರಯದಲ್ಲಿ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ. 3ರಂದು ಮಧ್ಯಾಹ್ನ 3 ಗಂಟೆಗೆ ನೂತನ ಸಿಂಥೆಟಿಕ್ ಟ್ರ್ಯಾಕ್ ಉದ್ಘಾಟನೆ ನಡೆಯಲಿದ್ದು, ಕ್ರೀಡಾ ಸಚಿವ ಅಭಯ ಚಂದ್ರಜೈನ್ ಉದ್ಘಾಟಿಸುವರು ಎಂದರು. ಬಾಲಕ-ಬಾಲಕಿಯರ 14, 16, 18 ಹಾಗೂ 20 ವಯೋವುತಿಯ ಒಟ್ಟು 128 ಸ್ಪರ್ಧೆಗಳು ನಡೆಯಲಿದ್ದು, ಆಗಸ್ಟ್ 22ರಂದು ತಮಿಳುನಾಡಿನ ಮಧುರೈನಲ್ಲಿ ನಡೆಯುವ ರಾಷ್ಟ್ರಮಟ್ಟದ ಹಾಗೂ ಅಂತರಾಷ್ಟ್ರೀಯ ಮಟ್ಟದ ಆಯ್ಕೆಯ ಪೂರಕವಾಗಿ ಇಲ್ಲಿ ಕ್ರೀಡಾಕೂಟ ನಡೆಯಲಿದೆ, ಅಂದಾಜು 800 ಕ್ರೀಡಾಪಟುಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

