ಶಿವಮೊಗ್ಗ

ರಾಷ್ಟ್ರೀಯ ಯುವ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Published On :

ಶಿವಮೊಗ್ಗ: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಹಾಗೂ ಶಿರಾಳಕೊಪ್ಪ ಬಳಕೆದಾರರ ವೇದಿಕೆ ಆಶ್ರಯದಲ್ಲಿ ಆ.2ರಂದು ಮಧ್ಯಾಹ್ನ 3 ಗಂಟೆಗೆ ಶಿರಾಳಕೊಪ್ಪದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಶಾಲಾ ಗ್ರಾಹಕರ ಕ್ಲಬ್ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ನ ನಿರ್ದೇಶಕ ಅಶೋಕಣ್ಣ ಅಗಡಿ ಉದ್ಘಾಟಿಸುವರು. ಸ.ಬಾ. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಎಸ್.ಎನ್. ಸೋಮಶೇಖರಪ್ಪ ಅಧ್ಯಕ್ಷತೆ ವಹಿಸುವರು. ಎಸ್ಡಿಎಂಸಿ ಅಧ್ಯಕ್ಷ ದಿವಾಕರ್ ಶಾನುಬೋಗ್ ಮುಖ್ಯ ಅತಿಥಿಯಾಗಿ ಆಗಮಿಸಲಿರುವರು. ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಸಂಚಾಲಕ ಎಂ.ಎಂ. ಜಯಸ್ವಾಮಿ, ಕಾರ್ಯದರ್ಶಿ ಎಸ್. ಚಂದ್ರಶೇಖರ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಲಿರುವರು. ಕಾರ್ಯಕ್ರಮ ಸಂಚಾಲಕ ಸಿ.ವಿ.ನರಸಿಂಹಮೂರ್ತಿ, ಪತ್ರಕರ್ತ ಬಿ.ವಿ. ಶೇಷಗಿರಿ, ವೈಭವ ಶಿವಣ್ಣ, ಗ್ರಾಹಕ ಮಾಹಿತಿ ಕೇಂದ್ರದ ನಿರ್ದೇಶಕ ಚನ್ನವೀರಶೆಟ್ಟರು ಹಾಗೂ ಡಾ. ಗಂಗಾಧರ್ ನಾಯಕ್ ಉಪಸ್ಥಿತರಿರುವರು.
ಪಡಿತರ ಚೀಟಿ ನವೀಕರಣಕ್ಕೆ ಸೂಚನೆ
ಶಿವಮೊಗ್ಗ: ಜಿಲ್ಲೆಯ ಗ್ರಾಮಾಂತರ ಪ್ರದೇಶಗಳನ್ನು ಹೊರತುಪಡಿಸಿ, ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ 2010ಕ್ಕಿಂತ ಮೊದಲು ಪಡೆದ ಶಾಶ್ವತ ಫೋಟೋ ಪಡಿತರ ಚೀಟಿದಾರರು ತಾವು ಹೊಂದಿದ ಎಪಿಎಲ್, ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರು ನವೀಕರಿಸಿಕೊಳ್ಳುವಂತೆ ಆಹಾರ ನಾಗರಿಕರ ಸರಬರಾಜು ಇಲಾಖೆ ತಿಳಿಸಿದೆ. ಮೊ- 9212357123ಗೆ ಖಈಖಊಃ ಎಂದು ಟೈಪ್ ಮಾಡಿ, ಪಡಿತರ ಕಾರ್ಡಿನ ನಂಬರನ್ನು ನಮೂದಿಸಿ, ಮೊಬೈಲ್ ಸಂದೇಶ ಕಳುಹಿಸಿದ್ದಲ್ಲಿ ಅಂತಹ ಕಾರ್ಡುದಾರರಿಗೆ ಪಡಿತರ ಹಂಚಿಕೆ ಮಾಡಲಾಗುವುದು. ಹೀಗಾಗಿ 2010ರ ಹಿಂದೆ ಪಡಿತರ ಚೀಟಿಗಳನ್ನು ಪಡೆದುಕೊಂಡವರು ನಿಯಮಾನುಸಾರ ಸಂದೇಶ ಕಳುಹಿಸಿ ನವೀಕರಿಸಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸ ರೈಲು ಸಂಚಾರ ಆರಂಭ
ಶಿವಮೊಗ್ಗ: ಶಿವಮೊಗ್ಗ- ತಾಳಗುಪ್ಪ ನಡುವಿನ ಹೊಸ ರೈಲು ಸಂಚಾರ ಆಗಸ್ಟ್ 3ರಿಂದ ಆರಂಭವಾಗಲಿದೆ.
ಕೇಂದ್ರ ರೈಲ್ವೇ ಸಚಿವ ಮಲ್ಲಿಕಾರ್ಜುನ ಖರ್ಗೆ ಆಗಸ್ಟ್ 3ರಂದು ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸಿ, ಹೊಸರೈಲು ಸಂಚಾರಕ್ಕೆ ಚಾಲನೆ ನೀಡುವರು. ನಂತರ ಅವರು ಅಂದು ಸಂಜೆ 4.30ಕ್ಕೆ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.