ಶಿವಮೊಗ್ಗ

ಸಚಿವರ ಪ್ರವಾಸ

Published On :

ಶಿವಮೊಗ್ಗ: ತೋಟಗಾರಿಕೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಾಮನೂರು ಶಿವಶಂಕರಪ್ಪನವರು ಆಗಸ್ಟ್ 2ರಂದು ಮಧ್ಯಾಹ್ನ 12.30ಕ್ಕೆ ಲಕ್ಕವಳ್ಳಿಗೆ ಆಗಮಿಸಿ, ಭದ್ರಾ ನದಿಗೆ ಬಾಗಿನ ಅರ್ಪಿಸುವರು. ನಂತರ ಅವರು ಲಕ್ಕವಳ್ಳಿಯಿಂದ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ತೆರಳುವರು.
ನೀರು ಮಿಶ್ರಿತ ಮದ್ಯ ಮಾರಾಟ: ಇಬ್ಬರ ಬಂಧನ
ಶಿವಮೊಗ್ಗ: ಮದ್ಯದ ಬಾಟಲಿಗಳಲ್ಲಿ ನೀರು ಮಿಶ್ರಣ ಮಾಡಿ ಮದ್ಯ ಮಾರಾಟ ಮಾಡುತ್ತಿದ್ದ ಹೊಳೆಹೊನ್ನೂರಿನ ಲಯನ್ ಬಾರ್ ಅಂಡ್ ರೆಸ್ಟೋರೆಂಟ್ನ ಮೇಲೆ ಅಬಕಾರಿ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಅನಿರೀಕ್ಷಿತ ದಾಳಿ ನಡೆಸಿದ ತಂಡ, ರೆಸ್ಟೋರೆಂಟ್ನ ಸಿಬ್ಬಂದಿ ತಿಮ್ಮೇಗೌಡ ಮತ್ತು ಕಾಂತರಾಜ್ ಎಂಬುವವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದಾಳಿಯ ಸಂದರ್ಭದಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ನಲ್ಲಿದ್ದ 2.50 ಲಕ್ಷ ಮೌಲ್ಯದ ಮದ್ಯವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಬಾರ್ ಮಾಲೀಕರಾದ ರಾಘವೇಂದ್ರ ಮತ್ತು ಮಂಜುನಾಥ ಅವರ ಬಂಧನಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು  ಎಂದು ಅಬಕಾರಿ ಇಲಾಖೆಯ ಉಪ ಆಯುಕ್ತ ಆರ್. ವೆಂಕಟೇಶ ಪದಕಿ ತಿಳಿಸಿದ್ದಾರೆ. ದಾಳಿ ಸಂದರ್ಭದಲ್ಲಿ ಅಬಕಾರಿ ನಿರೀಕ್ಷಕ ಹನುಮಂತಪ್ಪ ಡಿ.ಎನ್., ಎಚ್.ವಿ. ಮಂಜಯ್ಯ, ಎಸ್.ಡಿ. ಚಂದ್ರಪ್ಪ, ಮಡಿವಾಳಪ್ಪ ಮುಂತಾದವರು ಪಾಲ್ಗೊಂಡಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.