ಪದವಿ ಕಾಲೇಜಲ್ಲಿ ಪ್ರವೇಶಾವಕಾಶ ನೀಡಿ
ಕ.ಪ್ರ.ವಾರ್ತೆ ಟಿ ಶಿವಮೊಗ್ಗ ಟಿ ಆ.2
ಪಿಯುಸಿ ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪದವಿ ಕಾಲೇಜುಗಳಲ್ಲಿ ಪ್ರವೇಶವಕಾಶ ನೀಡಲು ಅವಕಾಶ ನೀಡುವಂತೆ ಒತ್ತಾಯಿಸಿ ಎನ್ಎಸ್ಯುಐ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.
2012-13ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ನಡೆಸಿದ ಪೂರಕ ಪರೀಕ್ಷಾ ಫಲಿತಾಂಶ ಜು.30ರಂದು ಪ್ರಕಟಗೊಂಡಿದ್ದು, ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪದವಿ ತರಗತಿಗಳಿಗೆ ಪ್ರವೇಶ ಪಡೆಯಲು ಆ.3 ಕೊನೆದಿನವಾಗಿದೆ. ಆದರೆ, ನಗರದ ಕೆಲ ಪದವಿ ಕಾಲೇಜುಗಳಲ್ಲಿ ವಾಣಿಜ್ಯ ವಿಭಾಗಕ್ಕೆ ಪ್ರವೇಶ ನೀಡುತ್ತಿಲ್ಲ. ಇದರಿಂದ ಸುಮಾರು 700 ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಪ್ರತಿಭಟನಕಾರರು ದೂರಿದರು.
ಪ್ರವೇಶಾವಕಾಶ ನೀಡಿ: ಈ ಕೂಡಲೇ ಜಿಲ್ಲಾಧಿಕಾರಿಗಳು ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿಗಳೊಂದಿಗೆ ಚರ್ಚೆ ನಡೆಸಿ, ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನಗರದ ಸಹ್ಯಾದ್ರಿ ಕಲಾ ಮತ್ತು ವಾಣಿಜ್ಯ ಕಾಲೇಜು ಅಥವಾ ಬಾಪೂಜಿನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶ ನೀಡುವಂತೆ ಸೂಚಿಸಬೇಕು. ಇಲ್ಲವಾದಲ್ಲಿ ಎನ್ಎಸ್ಯುಐ ತೀವ್ರ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಪ್ರತಿಭಟನಕಾರರು ಎಚ್ಚರಿಕೆ ನೀಡಿದರು.
ಎನ್ಎಸ್ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಜಿ. ಮಧುಸೂದನ್, ಜಿಲ್ಲಾಧ್ಯಕ್ಷ ಕೆ. ಚೇತನ್, ಶ್ರೀಜಿತ್, ವಿಕಾಸ್, ಸಂತೋಷ್ ಮೊದಲಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

