ಇಂದು ಸಚಿವ ಕಿಮ್ಮನೆ ಪ್ರವಾಸ
ಶಿವಮೊಗ್ಗ: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ್ ಅವರು ಆ. 3ರಂದು ಬೆಳಿಗ್ಗೆ 10ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸಿ, ವಾಸ್ತವ್ಯ ಮಾಡುವರು. ಆ.3ರಂದು ಮಧ್ಯಾಹ್ನ 12ಗಂಟೆಗೆ ನಗರದ ಕೆಪಿಟಿಸಿಎಲ್ ಸಭಾಂಗಣದಲ್ಲಿ ಏರ್ಪಡಿಸಿರುವ ಸನ್ಮಾನ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 2.30ಕ್ಕೆ ನೈಋತ್ಯ ರೈಲ್ವೇ ಘಟಕವು ನೂತನವಾಗಿ ಆರಂಭಿಸಲಿರುವ ತಾಳಗುಪ್ಪ- ಶಿವಮೊಗ್ಗ- ತಾಳಗುಪ್ಪ ರೈಲು ಮಾರ್ಗಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಕೇಂದ್ರ ರೈಲ್ವೇ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಭಾಗವಹಿಸುವರು. ಸಂಜೆ 4ಗಂಟೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್ ಹಾಗೂ ರಾಜ್ಯಮಟ್ಟದ 25ನೇ ಜ್ಯೂನಿಯರ್ ಅಥ್ಲೆಟಿಕ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 6ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ರಾಜ್ಯಮಟ್ಟದ ಯುವಜನ ಸಮ್ಮೇಳನ ತರಬೇತಿ ಮತ್ತು ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.
ಆ. 4ರಂದು ಬೆಳಿಗ್ಗೆ 11ಗಂಟೆಗೆ ತೀರ್ಥಹಳ್ಳಿಯ ಈಡಿಗರ ಸಂಘದ ಸನ್ಮಾನ ಸಮಾರಂಭ ಹಾಗೂ ಬೆಳಿಗ್ಗೆ 12.30ಕ್ಕೆ ಶಿವಮೊಗ್ಗದಲ್ಲಿ ಉಪ್ಪಾರ ಸಂಘದಿಂದ ನಡೆಯಲಿರುವ ಸನ್ಮಾನ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಸಂಜೆ 4.30ಕ್ಕೆ ಶಿವಮೊಗ್ಗದಿಂದ ದಾವಣಗೆರೆಗೆ ಪ್ರಯಾಣ ಬೆಳೆಸುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

