ಆ.9ರಿಂದ ವಾಲಿಬಾಲ್ ಪಂದ್ಯಾವಳಿ
ಕ.ಪ್ರ.ವಾರ್ತೆ ಶಿವಮೊಗ್ಗ ಆ.2
ಶ್ರೀ ಆದಿ ಚುಂಚನಗಿರಿ ಶಿಕ್ಷಣ ಟ್ರಸ್ಟ್, ಜಿಲ್ಲಾ ವಾಲಿಬಾಲ್ ಸಂಸ್ಥೆ, ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಆ.9ರಿಂದ 14ರವರೆಗೆ ನೆಹರು ಕ್ರೀಡಾಂಗಣದಲ್ಲಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಚುಂಚಾದ್ರಿ ಕಪ್ ಏರ್ಪಡಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜಿಲ್ಲಾ ವಾಲಿಬಾಲ್ ಸಂಸ್ಥೆ ಅಧ್ಯಕ್ಷ ಭಾಸ್ಕರ್ ಕಾಮತ್, ಪಂದ್ಯಾವಳಿಯನ್ನು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಉದ್ಘಾಟಿಸಲಿದ್ದು, ಶಾಸಕ ಕೆ.ಬಿ. ಪ್ರಸನ್ನಕುಮಾರ್, ಜಿಲ್ಲಾಧಿಕಾರಿ ವಿಪುಲ್ ಬನ್ಸಲ್, ಜಿಲ್ಲಾ ರಕ್ಷಣಾಧಿಕಾರಿ ಕೌಶಲೇಂದ್ರ ಕುಮಾರ್, ಡಿಡಿಪಿಐ ಎನ್.ಎಸ್. ಕುಮಾರ್ ಮತ್ತಿತರರು ಪಾಲ್ಗೊಳ್ಳುವರು ಎಂದರು.
1996-97ರಲ್ಲಿ ಸ್ವಾತಂತ್ರೋತ್ಸವ ಅಂಗವಾಗಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಮಾರ್ಗದರ್ಶನದಲ್ಲಿ ಆರಂಭಿಸಿದ ವಾಲಿಬಾಲ್ ಪಂದ್ಯಾವಳಿ ಚುಂಚಾದ್ರಿ ಕಪ್ ಎಂದು ನಾಮಕರಣ ಮಾಡಲಾಗಿತ್ತು. ಕಳೆದ ಬಾರಿ 32 ಬಾಲಕರ ತಂಡಗಳು, 18 ಬಾಲಕಿಯರ ತಂಡಗಳು ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿವೆ ಎಂದು ಮಾಹಿತಿ ನೀಡಿದರು.
ಪ್ರಥಮ ಬಹುಮಾನ 4 ಸಾವಿರ: ಪಂದ್ಯದಲ್ಲಿ ಅತ್ಯುತ್ತಮ ಆಟ ಪ್ರದರ್ಶಿಸಿದ ಬಾಲಕ, ಬಾಲಕಿಯರಿಗೆ ಬೆಸ್ಟ್ ಅಟ್ಯಾಕರ್, ಬೆಸ್ಟ್ ಬಸ್ಟರ್, ಬೆಸ್ಟ್ ಆಲ್ರೌಂಡರ್, ಬೆಸ್ಟ್ ಲೀಬ್ರೋ ಪ್ರಶಸ್ತಿ ನೀಡಲಾಗುವುದು. ವಿಜೇತ ಬಾಲಕರ ತಂಡಕ್ಕೆ ಪ್ರಥಮ ಬಹುಮಾನ 4 ಸಾವಿರ, ದ್ವಿತೀಯ ಬಹುಮಾನ 3 ಸಾವಿರ, ತೃತೀಯ ಬಹುಮಾನ 2 ಸಾವಿರ ಹಾಗೂ ಬಾಲಕಿಯರ ತಂಡಕ್ಕೆ 2 ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.
ಚುಂಚಾದ್ರಿ ಕಪ್ನಲ್ಲಿ ಭಾಗವಹಿಸುವ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಲಿದ್ದಾರೆ ಎಂದ ಅವರು, ಕ್ರೀಡಾಕೂಟದಲ್ಲಿ ಭಾಗವಹಿಸುವ ತಂಡಗಳು ಶ್ರೀ ಆದಿಚುಂಚನಗಿರಿ ಪ್ರೌಢಶಾಲೆಯ ಪ್ರಾಂಶುಪಾಲರು ಬಳಿ ಆ.7ರೊಳಗೆ ತಂಡದ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಒಲಂಪಿಕ್ ಸಂಸ್ಥೆ ಕಾರ್ಯದರ್ಶಿ ಕೆ.ಎಸ್. ಶಶಿ, ಜಿಲ್ಲಾ ವಾಲಿಬಾಲಲ್ರೇಫ್ರಿ ಬೋರ್ಡ್ ಛೇರ್ಮನ್ ಮೇಘರಾಜ್, ಜಿ.ಟಿ. ಚನ್ನಬಸಪ್ಪ, ಶಾಲೆಯ ಪ್ರಾಂಶುಪಾಲ ಪಾಲೆನಂದಾರಾವ್ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

