ಶಿವಮೊಗ್ಗ

ಪ್ರವಾಸಿ ಕೇಂದ್ರವಾಗಿ ಲಿಂಗನಮಕ್ಕಿ ಜಲಾಶಯ

Published On :

ಸಾಗರ: ಲಿಂಗನಮಕ್ಕಿ ಜಲಾಶಯಕ್ಕೆ ದಾಖಲೆ ಪ್ರಮಾಣದಲ್ಲಿ ನೀರು ಹರಿದುಬಂದು ಜಲಾಶಯದ ಇತಿಹಾಸದಲ್ಲಿ ಮೊದಲ ಬಾರಿಗೆ ಇಷ್ಟು ಬೇಗ ಭರ್ತಿಯಾಗಿದೆ. ಈ ಸನ್ನಿವೇಶವನ್ನು ಬಳಸಿಕೊಂಡು ಜೋಗವನ್ನು ಅತ್ಯುತ್ತಮ ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು.
ಲಿಂಗನಮಕ್ಕಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಶನಿವಾರ ಬಾಗಿನ ಅರ್ಪಿಸಿ ಮಾತನಾಡಿ, ಜೋಗ ಅಭಿವೃದ್ಧಿಗಾಗಿ ಸ್ಥಾಪಿಸಲಾಗಿರುವ ಜೋಗ ಅಭಿವೃದ್ಧಿ ಪ್ರಾಧಿಕಾರಕ್ಕೆ ವೇಗ ನೀಡಲಾಗುವುದು. ಲಿಂಗನಮಕ್ಕಿ ಆಣೆಕಟ್ಟಿನ ಕೆಳಭಾಗದ 60 ಎಕರೆ ಪ್ರದೇಶದಲ್ಲಿ ಕೆಆರ್‌ಎಸ್ ಮಾದರಿಯಲ್ಲಿ ಉದ್ಯಾನವನ ನಿರ್ಮಾಣ, ಜಲಪಾತದಲ್ಲಿ ವರ್ಷದ ಎಲ್ಲ ದಿನವೂ ನೀರು ಹರಿಯುವಂತೆ ರೀಸೈಕಲಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶ ಹೊಂದಲಾಗಿದೆ. ಇದರ ಜತೆಗೆ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸುವ ಯೋಜನೆ ಸಿದ್ಧಪಡಿಸಲಾಗುವುದು ಎಂದರು.
ವಿದ್ಯುತ್ ಸಮಸ್ಯೆ ಉಂಟಾಗದು: ರಾಜ್ಯಕ್ಕೆ ಜಲವಿದ್ಯುತ್ ನೀಡುವ ಲಿಂಗನಮಕ್ಕಿ ಜಲಾಶಯ ತುಂಬಿರುವುದರಿಂದ ನಿರೀಕ್ಷೆಗಿಂತ ಹೆಚ್ಚು ವಿದ್ಯುತ್ ಉತ್ಪಾದನೆ ಮಾಡುವ ನಿರೀಕ್ಷೆ ಹೊಂದಿದ್ದು ಈ ವರ್ಷರಾಜ್ಯಕ್ಕೆ ವಿದ್ಯುತ್ ಸಮಸ್ಯೆ ಉಂಟಾಗದು. ಕಳೆದ ವರ್ಷ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇದ್ದುದ್ದರಿಂದ ಸಮಸ್ಯೆ ಎದುರಿಸುವಂತಾಯಿತು. ಈ ಬಾರಿ ರಾಜ್ಯದ ಎಲ್ಲಾ ಭಾಗಗಳಲ್ಲೂ ಉತ್ತಮ ಮಳೆಯಾಗಿದ್ದು ಎಲ್ಲ ಜಲಾಶಯಗಳು ಬಹುತೇಕ ಭರ್ತಿಯಾಗಿರುವುದರಿಂದ ಇತರೆ ರಾಜ್ಯಗಳ ಮೇಲಿನ ವಿದ್ಯುತ್ ಅವಲಂಬನೆ ಕಡಿಮೆಯಾಗಲಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.