ಶಿವಮೊಗ್ಗ

'ಬೀಸನಗದ್ದೆಗೆ ಪರಿಹಾರ ಅಗತ್ಯ'

Published On :

ಸಾಗರ: ತಾಲೂಕಿನ ತಡಗಳಲೆ ಗ್ರಾಮದ ಬೀಸನಗದ್ದೆ ಗ್ರಾಮ ಪ್ರತಿವರ್ಷ ವರದಾನದಿಯ ಪ್ರವಾಹದಿಂದ ದ್ವೀಪವಾಗಿ ಹೊರ ಸಂಪರ್ಕ ಕಳೆದುಕೊಳ್ಳುತ್ತದೆ.
 ಪ್ರತಿವರ್ಷ ದೋಣಿ ಹಾಕುವುದು, ರಾಜಕಾರಣಿಗಳು, ಅಧಿಕಾರಿಗಳು ಪ್ರದೇಶಕ್ಕೆ ಭೇಟಿ ನೀಡುವುದು ಮಾಮೂಲಿಯಾಗಿದೆ. ಇದಕ್ಕೊಂದು ಶಾಶ್ವತ ಪರಿಹಾರವನ್ನು ಸ್ಥಳೀಯ ಶಾಸಕರಾಗಲೀ, ಅಧಿಕಾರಿಗಳಾಗಲೀ  ಯಾರೂ ಈವರೆಗೂ ಮಾಡಿಲ್ಲ ಎಂದು ಜಿಪಂ ಮಾಜಿ ಸದಸ್ಯ ಬಿ.ಆರ್. ಜಯಂತ್ ದೂರಿದ್ದಾರೆ.
  ತಡಗಳಲೆಯಿಂದ ಬೀಸನಗದ್ದೆವರೆಗೆ ಸುಮಾರು 1.50 ಕಿ.ಮೀ. ದೂರ 2 ಮೀಟರ್ ಎತ್ತರದ ಮಣ್ಣಿನ ಬ್ಯಾಂಕ್ ನಿರ್ಮಿಸಿ, ಇದರ ಮೇಲೆ ಜಲ್ಲಿ ರಸ್ತೆ ಮಾಡಿದರೆ ಸಮಸ್ಯೆ ಪರಿಹಾರವಾಗುತ್ತದೆ. ಹಣವನ್ನು ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ಭರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.