ಜಿಲ್ಲಾ ದೇಹದಾರ್ಢ್ಯ ಸ್ಪರ್ಧೆ: ಮನವಿ
ಶಿವಮೊಗ್ಗ: ಜಿಲ್ಲಾ ಬಾಡಿ ಬಿಲ್ಡಿಂಗ್ ಅಂಡ್ ಫಿಟ್ನೆಸ್ ಅಸೋಸಿಯೇಷನ ಸ್ವಾರ್ಥಕ್ಕಾಗಿ ಹಾಗೂ ಹಣ ಮಾಡುವ ಉದ್ದೇಶದಿಂದ ಸ್ಥಾಪಿತವಾದ ಸಂಸ್ಥೆ ಆಗಿದೆ. ಆದರಿಂದ ಈ ಸಂಸ್ಥೆ ಆ.18ರಂದು ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿರುವ ಜಿಲ್ಲಾ ದೇಹದಾರ್ಡ್ಯ ಸ್ಪರ್ಧೆಯಲ್ಲಿ ಸ್ಪರ್ಧಾಳುಗಳು ಭಾಗವಹಿಸದಂತೆ ಜಿಲ್ಲಾ ದೇಹದಾರ್ಡ್ಯ ಅಸೋಸಿಯೇಷನ್ ಕಾರ್ಯದರ್ಶಿ ಪ್ರಶಾಂತ್ ಕಾರಂತ್ ತಿಳಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಬಾಡಿ ಬಿಲ್ಡಿಂಗ್ ಅಸೋಸಿಯೇಷನ್ನಲ್ಲಿ ಸಂಸ್ಥೆ ನೋಂದಾಯಿಸಿಕೊಂಡಿಲ್ಲ. ಕೇವಲ ಸ್ವಾರ್ಥಕ್ಕಾಗಿ ಜಿಲ್ಲಾ ಬಾಡಿಬಿಲ್ಡಿಂಗ್ ಅಂಡ್ ಫಿಟ್ನೆಸ್ ಅಸೋಸಿಯೇಷನ್ ಹುಟ್ಟಿಕೊಂಡಿದೆ ಎಂದ ಅವರು, ಜಿಲ್ಲಾ ದೇಹದಾರ್ಡ್ಯ ಸಂಸ್ಥೆ 2005-06ರಲ್ಲಿ ಕರ್ನಾಟಕ ರಾಜ್ಯ ಬಾಡಿ ಬಿಲ್ಡಿಂಗ್ ಮತ್ತು ಫಿಟ್ನೆಸ್ ಅಸೋಸಿಯೇಷನ್ನಲ್ಲಿ ನೋಂದಾಯಿಸಿಕೊಂಡಿದ್ದು, ನಮ್ಮ ಸಂಸ್ಥೆಯಿಂದ ಪ್ರತಿ ವರ್ಷ ಜಿಲ್ಲಾ ದೇಹದಾರ್ಡ್ಯ ಸ್ಪರ್ಧೆ ಏರ್ಪಡಿಸಿ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಕ್ರೀಡಾಪಟುಗಳಿಗೆ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು. ಆದರಿಂದ ಸ್ಪರ್ಧಾಳುಗಳು ಜಿಲ್ಲಾ ಬಾಡಿ ಬಿಲ್ಡಿಂಗ್ ಅಂಡ್ ಫಿಟ್ನೆಸ್ ಅಸೋಸಿಯೇಷನ್ ಆಯೋಜಿಸಿರುವ ಸ್ಪರ್ಧೆಯಲ್ಲಿ ಭಾಗವಹಿಸದಂತೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಖಜಾಂಚಿ ಶಿವಕುಮಾರ್, ದೊರೈಚಿನ್ನಪ್ಪ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

