2ನೇ ಸಮವಸ್ತ್ರ ಖರೀದಿ: ಎಸ್ಡಿಎಂಸಿ ಖಾತೆಗೆ ಅನುದಾನ
ಕ.ಪ್ರ.ವಾರ್ತೆ, ಶಿವಮೊಗ್ಗ, ಆ.5
2013-14ನೇ ಸಾಲಿನ ಸರ್ವಶಿಕ್ಷಣ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ 2ನೇ ಜತೆ ಸಮವಸ್ತ್ರಕ್ಕೆ ಪ್ರತಿ ವಿದ್ಯಾರ್ಥಿಗೆ 200ರಂತೆ ಶಾಲಾ ಎಸ್ಡಿಎಂಸಿ ಖಾತೆಗಳಿಗೆ ಅನುದಾನ ಬಿಡುಗಡೆ ಮಾಡಿರುವುದಾಗಿ ಸರ್ವಶಿಕ್ಷ ಅಭಿಯಾನ ಸಮಿತಿ ಅಧ್ಯಕ್ಷ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.
ನಗರದ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಸರ್ಕಾರಿ ಪ್ರಾಥಮಿಕ ಶಾಲೆಯ 1ರಿಂದ 8ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಎಲ್ಲಾ ವರ್ಗದ ಹೆಣ್ಣುಮಕ್ಕಳಿಗೆ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮತ್ತು ಬಿಪಿಎಲ್ ಕಾರ್ಡ್ ಹೊಂದಿದ ಗಂಡುಮಕ್ಕಳಿಗೆ ಈ ಯೋಜನೆ ಅನ್ವಯವಾಗುತ್ತದೆ ಎಂದರು.
1,27,021 ಸಮವಸ್ತ್ರ: ಬಟ್ಟೆಯ ಮಾದರಿ ಹಾಗೂ ಗುಣಮಟ್ಟ ಸೇರಿದಂತೆ ತಲಾ 200ರಂತೆ 2ನೇ ಜೊತೆ ಸಮವಸ್ತ್ರವನ್ನು ಸ್ಥಳೀಯ ದರ್ಜಿಗಳಿಂದ ಅಥವಾ ಸ್ತ್ರೀಶಕ್ತಿ ಸಂಘಗಳ ಮೂಲಕ ಹೊಲಿಸಿ ಕೊಡುವಂತೆ ಈಗಾಗಲೇ ಸಮವಸ್ತ್ರ ಖರೀದಿಸಲು ಬಿಡುಗಡೆ ಮಾಡಿರುವ ಪ್ರತಿಯಲ್ಲಿ ಎಸ್ಡಿಎಂಸಿಗೆ ತಿಳಿಸಲಾಗಿದ್ದು, ಜಿಲ್ಲೆಯ 1,27,021 ವಿದ್ಯಾರ್ಥಿಗಳ ಸಮವಸ್ತ್ರಕ್ಕಾಗಿ 2,54,04,200 ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ಸರ್ವಶಿಕ್ಷ ಅಭಿಯಾನ ಯೋಜನೆಯ ಮುಖ್ಯ ಉದ್ದೇಶವೇ ಶೈಕ್ಷಣಿಕವಾಗಿ ಮೂಲಸೌಲಭ್ಯ ಕಲ್ಪಿಸುವುದಾಗಿದ್ದು, ಪ್ರಮುಖವಾಗಿ ಶಾಲಾ ಕಟ್ಟಡ ಹಾಗೂ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಯೋಜನೆಯ ಕಾಮಗಾರಿಗಳು ಸಾರ್ವಜನಿಕರ ಸಹಭಾಗಿತ್ವದಲ್ಲಿ ಆಗಲಿದ್ದು, ಪ್ರಸ್ತುತ ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಹಭಾಗಿತ್ವದಲ್ಲಿ 3,500 ಮೀಟರ್ ಶಾಲಾ ಕಾಂಪೌಂಡ್ ನಿರ್ಮಿಸಲಾಗಿದೆ. ಮುಂದಿನ ಮೂರು ವರ್ಷದಲ್ಲಿ ಎಲ್ಲಾ ಶಾಲೆಗೂ ಕಾಂಪೌಂಡ್ ನಿರ್ಮಾಣಕಾರ್ಯ ಪೂರ್ಣಗೊಳ್ಳಲಿದೆ ಎಂದರು.
ನುರಿತ ಶಿಕ್ಷಕರು: ಅಲ್ಲದೆ, ಶಾಲೆ ಬಿಟ್ಟ ಮಕ್ಕಳನ್ನು ಆನ್ಲೈನ್ ಟ್ರೇಸಿಂಗ್ ಮೂಲಕ ಪತ್ತೆ ತಂತ್ರಜ್ಞಾನ ಅಳವಡಿಸಿದ್ದು, ಅಂತಹ ಮಕ್ಕಳನ್ನು ಪುನ- ಶಾಲೆಗೆ ಕರೆತರುವ ಪ್ರಯತ್ನ ಮಾಡಲಾಗುತ್ತಿದೆ.
ಸಾಮಾನ್ಯ ಶಾಲೆಯಲ್ಲಿ ಸಾಮಾನ್ಯ ಮಕ್ಕಳೊಂದಿಗೆ, ಸಾಮಾನ್ಯ ಪಠ್ಯಕ್ರಮದೊಂದಿಗೆ ವಿಶೇಷವಾಗಿ ಅಗತ್ಯವುಳ್ಳ ಮಗು ವಿಶೇಷ ಚಟುವಟಿಕೆಗಳ ಮೂಲಕ ನುರಿತ ಶಿಕ್ಷಕರಿಂದ ಕಲಿಯುವ ಸಮನ್ವಯ ಶಿಕ್ಷಣವನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆ.
2013-14ನೇ ಸಾಲಿನಲ್ಲಿ ಗುರುತಿಸಲಾದ ವಿಶೇಷ ಅಗತ್ಯವುಳ್ಳ 4,301 ಮಕ್ಕಳಲ್ಲಿ 1,507 ಮಕ್ಕಳು ಜೂನ್ನಲ್ಲಿ ನಡೆದ ವೈದ್ಯಕೀಯ ತಪಾಸಣಾ ಶಿಬಿರಕ್ಕೆ ಹಾಜರಾಗಿದ್ದು, ಇದರಲ್ಲಿ 714 ಮಕ್ಕಳಿಗೆ ಟ್ರೈಸಿಕಲ್, ವೀಲ್:ಲ್ಯೇರ್, ಸಿಪಿರೋಲೆಟರ್, ಕ್ರಚಸ್ಶ್ರ್ವಣೋಪಕರಣಗಳು ಇತ್ಯಾದಿ ಸಾಧನ ಸಲಕರಣೆಗಳನ್ನು ವಿತರಿಸಲಾಗಿದೆ. ಅಲ್ಲದೆ, 276 ದೃಷ್ಟಿದೋಷವಿರುವ ಮಕ್ಕಳಲ್ಲಿ 34 ಮಕ್ಕಳಿಗೆ ಕನ್ನಡಕ ವಿತರಿಸಲಾಗಿದೆ. ಹಾಗೂ 47 ಮಕ್ಕಳು ಕರೆಕ್ಟಿವ್ ಸರ್ಜರಿಗೆ ಆಯ್ಕೆಯಾಗಿದ್ದು, ಈ ಪೈಕಿ ಒಂದು ಮಗುವಿಗೆ ನಗರದ ಆಸ್ಪತ್ರೆಯಲ್ಲಿ ಸರ್ಜರಿ ಮಾಡಿಸಲಾಗಿದೆ ಎಂದು ಅವರು ವಿವರಿಸಿದರು.
ಬಹು ಅಂಗವೈಕಲ್ಯವಿರುವ ಒಟ್ಟು 129 ಮಕ್ಕಳಿಗೆ ಗೃಹಾಧಾರಿತ ಶಿಕ್ಷಣ ನೀಡಲಾಗುತ್ತಿದ್ದು, ಇವರಿಗೆ ಜೀವನ ಕೌಶಲ್ಯವನ್ನು ಕಲಿಸಲು 57 ಸ್ವಯಂ ಸೇವಕರನ್ನು ನೇಮಿಸಿಕೊಳ್ಳಲಾಗಿದೆ. ಈ ಮೂಲಕ ಶಾಲಾಧಾರಿತ ಶಿಕ್ಷಣಕ್ಕೆ ಉತ್ತೇಜನ ನೀಡಲಾಗುತ್ತಿದೆ. ಒಟ್ಟಾರೆ 13-14ನೇ ಸಾಲಿನಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳಿಗಾಗಿ 51.61ಲಕ್ಷ ರುಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಎಸ್. ಕುಮಾರ್, ಸರ್ವಶಿಕ್ಷ ಅಭಿಯಾನದ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಗಣಪತಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

