ಶಿವಮೊಗ್ಗ

ಝಾನ್ಸಿರಾಣಿ ಹುಕ್ಕಾ ಚಿತ್ರ ರದ್ದಿಗೆ ಆಗ್ರಹ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ,  ಆ.5
ಸಿಬಿಎಸ್‌ಸಿ ಪಠ್ಯಪುಸ್ತಕದಲ್ಲಿ ಝಾನ್ಸಿರಾಣಿ ಲಕ್ಷ್ಮೀಬಾಯಿಯವರನ್ನು ಹುಕ್ಕಾ ಹಿಡಿದಿರುವಂತೆ ಚಿತ್ರಿಸಿ ಅಪಮಾನ ಮಾಡಿದ ಪಠ್ಯಕ್ರಮವನ್ನು ಕೂಡಲೇ ರದ್ದುಮಾಡುವಂತೆ ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸಿಬಿಎಸ್‌ಸಿ 5ನೇ ತರಗತಿಯ ಸಮಾಜವಿಜ್ಞಾನ ಪಠ್ಯಪುಸ್ತಕದಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಝಾನ್ಸಿಯ ಪಾತ್ರ ಎಂಬ ಅಧ್ಯಾಯದಲ್ಲಿ ಝಾನ್ಸಿರಾಣಿ ಲಕ್ಷ್ಮೀಬಾಯಿ ಅವರನ್ನು ಹುಕ್ಕಾ ಹಿಡಿದಿರುವಂತೆ ಚಿತ್ರಿಸಿ ಅಪಮಾನ ಮಾಡಿದ್ದಾರೆ. ಇದಕ್ಕೆ ಕಾರಣವಾದ ವ್ಯಕ್ತಿಗಳ ಮೇಲೆ ಕಾನೂನು ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಝಾನ್ಸಿರಾಣಿ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಲಕ್ಷಾಂತರ ದೇಶಭಕ್ತರಿಗೆ ಪ್ರೇರಣೆಯಾಗಿದ್ದಾರೆ. ಆದರೆ, ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ಕಾಂಗ್ರೆಸ್ ಸರ್ಕಾರ ದೇಶದ ಶ್ರೇಷ್ಠ ಇತಿಹಾಸಕ್ಕೆ ತಿಲಾಂಜಲಿ ನೀಡುವ ಮೂಲಕ ದೇಶದ್ರೋಹ ಕೃತ್ಯ ಮಾಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪ್ರಚೋದನೆ: ಇದೇ ಕೇಂದ್ರ ಸರ್ಕಾರ ಒಂದೆಡೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಚಿತ್ರಗಳ ಮೇಲೆ ನಿಷೇಧ ವಿಧಿಸುವ ಕಾನೂನು ಜಾರಿಗೆ ತಂದಿದೆ. ಮತ್ತೊಂದೆಡೆ ಮಕ್ಕಳ ಪಠ್ಯಪುಸ್ತಕದಲ್ಲಿ ಹುಕ್ಕಾ ಸೇವನೆ ಚಿತ್ರವನ್ನು ಮುದ್ರಿಸಿ ಮಕ್ಕಳನ್ನು ವ್ಯಸನದೆಡೆಗೆ ಪ್ರಚೋದಿಸಿದೆ ಎಂದು ಆಪಾದಿಸಿದರು.
ಝಾನ್ಸಿರಾಣಿ ಚಿತ್ರವನ್ನು ಅಪಮಾನ ಮಾಡಿ ಮುದ್ರಿಸಿರುವ ಪಠ್ಯಕ್ರಮ ಮಂಡಳಿ ವಿರುದ್ಧ ಸೂಕ್ತ ಕಾನೂನುಕ್ರಮಗೊಳ್ಳಬೇಕು ಎಂದು ಪ್ರತಿಭಟನಾಕರಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಮಿತಿಯ ಮುಖಂಡ ಯೋಗೇಶ್, ಪ್ರಭಾಕರ್, ದೇವರಾಜ, ಸೌಮ್ಯ, ಕಾಂಚನಾ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.