ಮದ್ಯದಂಗಡಿ ತೆರವಿಗೆ ಪ್ರತಿಭಟನೆ
ಕ.ಪ್ರ.ವಾರ್ತೆ, ಶಿವಮೊಗ್ಗ, ಆ.5
ನಗರದ ನ್ಯೂಮಂಡ್ಲಿಯ ಮುಖ್ಯ ರಸ್ತೆಯಲ್ಲಿ ಹೊಸದಾಗಿ ಮದ್ಯದಂಗಡಿ ಪ್ರಾರಂಭವಾಗಿದ್ದು, ಕೂಡಲೇ ಮದ್ಯದಂಗಡಿಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ನ್ಯೂಮಂಡ್ಲಿ ನಿವಾಸಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನ್ಯೂಮಂಡ್ಲಿಯ ಮುಖ್ಯರಸ್ತೆಯ ಪೂಜಾ ಕ್ಲಿನಿಕ್ ಹಾಗೂ ಕಿರಣ್ ಮೆಡಿಕಲ್ಸ್ ಮಧ್ಯಭಾಗದಲ್ಲಿ ಮದ್ಯದಂಗಡಿ ಪ್ರಾರಂಭವಾಗಿದ್ದು, ಇದರಿಂದ ಸಾರ್ವಜನಿಕರಿಗೆ ತೀವ್ರತೊಂದರೆಯಾಗುತ್ತಿದೆ. ಇದೇ ರಸ್ತೆಯಲ್ಲಿ ಉರ್ದು ಮತ್ತು ಕನ್ನಡ ಶಾಲೆಗಳು, ಅಂಗನವಾಡಿ ಕೇಂದ್ರಗಳಿವೆ. ಇದರಿಂದ ಈ ರಸ್ತೆಯಲ್ಲಿ ಓಡಾಡುವ ಮಕ್ಕಳಿಗೆ ಸಮಸ್ಯೆ ಆಗುತ್ತದೆ ಎಂದು ಪ್ರತಿಭಟನಾಕಾರರು ದೂರಿದರು.
ತೆರವಿಗೆ ಸೂಚಿಸಿ: ಮದ್ಯದಂಗಡಿಯಲ್ಲಿ ಕುಡಿದ ವ್ಯಕ್ತಿಗಳು ರಸ್ತೆಯಲ್ಲಿ ಓಡಾಡುವ ಹೆಣ್ಣುಮಕ್ಕಳಿಗೆ ತೊಂದರೆ ನೀಡುತ್ತಿದ್ದಾರೆ. ಅಡ್ಡಗಟ್ಟಿ ಕೀಟಲೆ ಮಾಡುತ್ತಿದ್ದಾರೆ. ಇದರಿಂದ ಸ್ಥಳೀಯ ಹೆಣ್ಣುಮಕ್ಕಳು, ವಿದ್ಯಾರ್ಥಿನಿಯರು ಓಡಾಡಲು ಕಷ್ಟಕರವಾಗಿದೆ. ಕೂಡಲೇ ಮದ್ಯದಂಗಡಿ ತೆರವು ಮಾಡಲು ಜಿಲ್ಲಾಧಿಕಾರಿಗಳು ಅಬಕಾರಿ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ಸಾರ್ವಜನಿಕರು ಮುಕ್ತವಾಗಿ ಸಂಚರಿಸಲು ಅವಕಾಶ ಮಾಡಿಕೊಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಮದ್ಯದಂಗಡಿಯನ್ನು ಬೇರೆಡೆ ಸ್ಥಳಾಂತರಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.ಈ ನಡುವೆ ಭಾನುವಾರದಿಂದ ಮದ್ಯದಂಗಡಿ ಪ್ರಾರಂಭವಾಗಿದ್ದು, ಕೂಡಲೇ ಇದನ್ನು ಸ್ಥಳಾಂತರಿಸಬೇಕು ಅಥವಾ ಮದ್ಯದಗಂಡಿಯ ಪರವಾನಗಿ ರದ್ದು ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಸುವರ್ಣ, ನಾಗರಾಜ್, ಮನ್ಸೂರ್ ಆಲಿ, ಇಸ್ಮಾಯಿಲ್, ರಫೀಕ್, ಫಯಾಜ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

