ಕೃಷಿಗೆ ಹೆಚ್ಚಿನ ಪ್ರೋತ್ಸಾಹ: ಕಾಗೋಡು
ಕ.ಪ್ರ.ವಾರ್ತೆ , ಸಾಗರ , ಆ.7
ಸಹಕಾರಿ ಸಂಸ್ಥೆಗಳು ಗ್ರಾಮಾಂತರ ಪ್ರದೇಶದಲ್ಲಿ ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಮೂಲಕ ರೈತರಲ್ಲಿ ಆರ್ಥಿಕ ಚೈತನ್ಯವನ್ನು ತುಂಬುವ ಕೆಲಸ ಮಾಡುತ್ತಿದೆ ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು.
ತಾಲೂಕಿನ ಉಳ್ಳೂರು ಗ್ರಾಮದಲ್ಲಿ ಬುಧವಾರ ಕೃಷಿ ಮತ್ತು ಪತ್ತಿನ ಸಹಕಾರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ, ಸಹಕಾರಿ ಸಂಸ್ಥೆಗಳು ಗ್ರಾಮೀಣ ಭಾರತದ ಬೆನ್ನೆಲುಬಾಗಿದೆ ಎಂದು ಅಭಿಪ್ರಾಯಪಟ್ಟರು.
ಸರ್ಕಾರ ಸಹಕಾರಿ ಸಂಘಗಳ ಮೇಲೆ ಹೆಚ್ಚು ನಂಬಿಕೆ ಇರಿಸಿದೆ. ಸಹಕಾರಿ ಸಂಘಗಳ ಮೂಲಕ ರೈತಪರವಾದ ಅನೇಕ ಯೋಜನೆಗಳಿಗೆ ಚಾಲನೆ ನೀಡಿದೆ. ಅದನ್ನು ಯಶಸ್ವಿಯಾಗಿ ನಡೆಸಿಕೊಂಡು ಹೋಗುವ ಜವಾಬ್ದಾರಿ ಸಹಕಾರಿ ಬಂಧುಗಳ ಮೇಲಿದೆ ಎಂದರು.
ಮಾರಾಟಗಾರರ ವಿರುದ್ಧ ಕ್ರಮ: ಸಹಕಾರಿ ಸಂಘಗಳು ನಡೆಸುವ ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆ ಅನುಷ್ಠಾನಗೊಳ್ಳುತ್ತಿದೆ. ಕೆಲವು ನ್ಯಾಯಬೆಲೆ ಅಂಗಡಿಗಳಲ್ಲಿ 30 ಕೆ.ಜಿ. ಅಕ್ಕಿಯನ್ನು ಪಡಿತರದಾರರು ಸರಿಯಾಗಿ ಪಡೆಯುತ್ತಿಲ್ಲ. ಉಳಿಯುವ ಅಕ್ಕಿಯನ್ನು ಅಂಗಡಿಗಳಲ್ಲಿ ಮಾರಾಟ ಮಾಡುವ ಕೆಲಸ ನಡೆಯುತ್ತಿರುವ ಬಗ್ಗೆ ದೂರುಗಳಿದೆ. ಅಂತಹ ಪ್ರಕರಣ ಕಂಡು ಬಂದರೆ ನ್ಯಾಯಬೆಲೆ ಅಂಗಡಿ ಹಾಗೂ ಪಡಿತರ ಕಾರ್ಡ್ ಹೊಂದಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎಂ. ಮಂಜುನಾಥ ರಾವ್, ಈಗಾಗಲೇ ಸೊಸೈಟಿಯು ಲಾಭದಾಯಕವಾಗಿ ನಡೆಯುತ್ತಿದ್ದು, ಕಳೆದ ಆರ್ಥಿಕ ವರ್ಷದಲ್ಲಿ ಶೇ.100ರಷ್ಟು ಸಾಲ ವಸೂಲಾತಿ ಮಾಡಿದೆ. ಸೊಸೈಟಿ ಮೂಲಕ ರೈತರಿಗೆ ಕೃಷಿ ಪರಿಕರಗಳನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದರು.
ನಿರ್ದೇಶಕರಾದ ಎಚ್. ಕನ್ನಪ್ಪ, ತಿರುಮಲೇಶ್, ಅಣ್ಣಪ್ಪ, ಕಾರ್ಯನಿರ್ವಹಣಾಧಿಕಾರಿ ಅನಂತ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

