ಶಿವಮೊಗ್ಗ

ಅಧಿಕಾರಿಗಳಿಂದ ಕಿರಿಕಿರಿ: ಜಿಲ್ಲಾಧಿಕಾರಿಗೆ ಮನವಿ

Published On :

ಶಿವಮೊಗ್ಗ: ಪಡಿತರ ವಿತರಕರಿಗೆ ಸಂಘ, ಸಂಸ್ಥೆ ಮತ್ತು ಕೆಲ ಅಧಿಕಾರಿಗಳಿಂದ ಆಗುತ್ತಿರುವ ಕಿರುಕುಳವನ್ನು ತಪ್ಪಿಸುವಂತೆ ಒತ್ತಾಯಿಸಿ ಶಿವಮೊಗ್ಗ ನಗರ ಪಡಿತರ ವಿತರಕರ ಸಂಘ ಬುಧವಾರ ಜಿಲ್ಲಾಧಿಕಾರಿಗೆ ಮನವಿ ಮಾಡಿದೆ.
ಕೆಲ ಸಂಘಟನೆ ಸದಸ್ಯರು ನ್ಯಾಯಬೆಲೆ ಅಂಗಡಿಗೆ ಆಗಮಿಸಿ ಉಚಿತವಾಗಿ ಧಾನ್ಯ, ಹಣ ನೀಡುವಂತೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಇಷ್ಟು ದಿನ ಇದನ್ನು ಸಹಿಸಿಕೊಂಡು ಬಂದಿದ್ದು, ಇದೀಗ ಅವರ ಹಾವಳಿ ಅಧಿಕವಾಗಿದೆ. ಆದ್ದರಿಂದ ತಮ್ಮ ಗಮನಕ್ಕೆ ತರುತ್ತಿದ್ದೇವೆ. ನಮಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಸಂಘ ಒತ್ತಾಯಿಸಿದೆ.
ಸರ್ಕಾರ ಪಡಿತರ ಧಾನ್ಯಗಳಿಗೆ ನೀಡುತ್ತಿರುವ ಕಮೀಷನ್ ದರ ಕಡಿಮೆ ಇದೆ. ಇದರಿಂದ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಹೆಚ್ಚು ಹೊರೆ ಆಗುತ್ತಿದೆ ಎಂದ ತಿಳಿಸಿರುವ ಸಂಘ, ರಾಜ್ಯದ ಅನ್ನಭಾಗ್ಯ ಯೋಜನೆಯಡಿ ಜಾರಿಯಾದ ನಂತರ, ಅಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲಸಗಾರರ ಸಂಬಳ, ಸಾಗಣಿಕೆ, ಬಾಡಿಗೆ ಮತ್ತಿತರ ವೆಚ್ಚ ಸೇರಿದಂತೆ ಸುಮಾರು 12 ಸಾವಿರ ತಗುಲುತ್ತಿದೆ.. ಕಮೀಷನ್ ಹಣವನ್ನು ಹೆಚ್ಚಿಸಬೇಕು ಎಂದು ಸಂಘ ಆಗ್ರಹಿಸಿದೆ. ಸಂಘದ ಅಧ್ಯಕ್ಷ ಕೆ. ನಾಗರಾಜ್, ಕಾರ್ಯದರ್ಶಿ ವಿ.ಎ. ಹಾಲೇಶ್‌ಬಾಬು, ಖಜಾಂಚಿ ಮುರುಗೇಶ್, ಸಂಘಟನಾ ಕಾರ್ಯದರ್ಶಿ ನಟರಾಜ್ ಶಾಸ್ತ್ರಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.