ಮಳೆಗಾಲದಲ್ಲಿ ತಿಂಗಳು ರಜೆ ನೀಡಿ: ರಘು
ಮೂಡಿಗೆರೆ: ಮಳೆಗಾಲ ಪ್ರಾರಂಭವಾಯಿತೆಂದರೇ ಸಾಕು, ಶಾಲಾ- ಕಾಲೇಜುಗಳಿಗೆ ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳು ರಸ್ತೆ ಇಲ್ಲದೆ, ಕಾಲುಸುಂಕ ದಾಟಿ ಹರ ಸಾಹಸ ಪಟ್ಟು ಬರಬೇಕಾದ ಪರಿಸ್ಥಿತಿ ಒದಗಿ ಬಂದಿದ್ದು, ಮಲೆನಾಡು ಭಾಗಗಳಲ್ಲಿ ಮಳೆಗಾಲದಲ್ಲಿ ಒಂದು ತಿಂಗಳು ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸುವಂತೆ ಸರ್ಕಾರವನ್ನು ಒತ್ತಾಯಿಸಿರುವುದಾಗಿ ಕರವೇ ಗೌರವಾಧ್ಯಕ್ಷ ಹೊರಟ್ಟಿ ರಘು ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆರಾಯನ ಆರ್ಭಟದಿಂದ ಹಳ್ಳ- ಕೊಳ್ಳಗಳು ತುಂಬಿ ಹರಿಯುವುದರೊಂದಿಗೆ ಅತಿವೃಷ್ಟಿಯಿಂದ ರೈತರು ಮತ್ತು ಬೆಳೆಗಾರರು ಕಂಗಾಲಾಗುತ್ತಿದ್ದಾರೆ. ಮತ್ತೆ ಕೆಲವು ಕಡೆಗಳಲ್ಲಿ ಗುಡ್ಡಗಳು ಜರುಗಿ, ಮರಗಳು, ವಿದ್ಯುತ್ ಕಂಬಗಳು ಧರೆಗೆ ಉರುಳುತ್ತಿರುವ ಪರಿಣಾಮ ರಸ್ತೆಗಳು ಬಂದ್ ಆಗುತ್ತಿದ್ದು, ವಿದ್ಯಾರ್ಥಿಗಳಿಗೆ ಬಹಳ ಅನಾನುಕೂಲಗಳು ಉಂಟಾಗುತ್ತಿದೆ.
ಶಾಲೆ ಬಿಟ್ಟ ನಂತರ ಮನೆ ಸೇರಲು ಕೆಲವು ವಿದ್ಯಾರ್ಥಿಗಳಿಗೆ ಸಾಧ್ಯವಾಗದೆ ಬಸ್ ನಿಲ್ದಾಣ ಅಥವಾ ಶಾಲಾ ಕಾಲೇಜುಗಳ ಜಗುಲಿಯಲ್ಲಿ ಕಾಲ ಕಳೆಯಬೇಕಾದ ಪರಿಸ್ಥಿತಿ ಎದುರಾಗಿದೆ. ಬಯಲು ಸೀಮೆಗಳಲ್ಲಿ ಉರಿ ಬಿಸಿಲು ಹೇಗೋ ಮಳೆಗಾಲದಲ್ಲಿ ಮಳೆರಾಯನ ರೌದ್ರಾವತಾರವು ಹಾಗೇ ಆಗಿದೆ ಎಂದರು. ಕರವೇ ಅಧ್ಯಕ್ಷ ಪ್ರಸನ್ನ ದಾರದಹಳ್ಳಿ ಮಾತನಾಡಿ, ಮಲೆನಾಡು ಭಾಗಗಳಲ್ಲಿರುವ ಬಹುತೇಕ ಶಾಲಾ-ಕಾಲೇಜುಗಳು ಸೋರುತ್ತಿರುವುದು ಸಾಮಾನ್ಯವಾಗಿದೆ ಎಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

