ಸಮರ್ಪಕ ದಾಖಲೆ ಒದಗಿಸಿದರೆ ಸೂಕ್ತ ಪರಿಹಾರ
ಕ.ಪ್ರ.ವಾರ್ತೆ ಶಿವಮೊಗ್ಗ ಆ.8
ಅತಿವೃಷ್ಟಿಯಿಂದ ಹಾನಿಗೊಳಗಾದ ರೈತರು ಕೃಷಿ ಭೂಮಿಯ ಸಮರ್ಪಕ ದಾಖಲೆ ಒದಗಿಸಿದರೆ ಕೂಡಲೇ ಸೂಕ್ತ ಪರಿಹಾರ ವ್ಯವಸ್ಥೆ ಮಾಡಲಾಗುವುದು ಎಂದು ವಿಧಾನಸಭಾ ಅಧ್ಯಕ್ಷ ಕಾಗೋಡು ತಿಮ್ಮಪ್ಪ ಭರವಸೆ ನೀಡಿದ್ದಾರೆ.
ಸಾಗರ ತಾಲೂಕು ಹಿರೇಬಿಲಗುಂಜಿ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಕೃತಿ ವಿಕೋಪದಿಂದ ನಷ್ಟ ಅನುಭವಿಸಿರುವ ರೈತರಿಗೆ ಸಮರ್ಪಕ ಪರಿಹಾರ ಕೊಡಿಸಲು ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಪಂಚಾಯಿತಿ ಅಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸಬೇಕೆಂದು ಕರೆನೀಡಿದರು.
ಸೂಕ್ತ ಪರಿಹಾರ: ಅತಿವೃಷ್ಠಿಯಿಂದ ಹಾನಿಗೊಳಗಾದ ರೈತರ ಕೃಷಿ ಭೂಮಿಯ ಸಮರ್ಪಕ ದಾಖಲೆ ಪಡೆದು, ಗ್ರಾಮ ಲೆಕ್ಕಿಗರು ಹಾಗೂ ರೆವಿನ್ಯೂ ಇನ್ಸ್ಪೆಕ್ಟರ್ ಮುಖಾಂತರ ತಹಸೀಲ್ದಾರರಿಗೆ ಕಳುಹಿಸಿದರೆ, ಕೂಡಲೇ ನೊಂದ ಕುಟುಂಬಕ್ಕೆ ಪರಿಹಾರದ ವ್ಯವಸ್ಥೆ ಒದಗಿಸಲಾಗುವುದು ಎಂದರು.
ನೇಮಕಾತಿ ಪ್ರಾರಂಭ: ಈ ಸಂದರ್ಭದಲ್ಲಿ ಸ್ಥಳೀಯ ಜನರ ಸಮಸ್ಯೆಯಾದ ಸರ್ಕಾರಿ ವೈದ್ಯರು ಹಾಗೂ ಗ್ರಾಮ ಲೆಕ್ಕಿಗರ ಕೊರತೆಯ ಬಗ್ಗೆ ಪ್ರಸ್ತಾಪಿಸಿ, ಕಳೆದ ಹಲವು ವರ್ಷಗಳಿಂದ ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳದೇ ಇರುವುದರಿಂದ ಈ ಸಮಸ್ಯೆ ಉದ್ಭವಿಸಿದೆ. ಸದ್ಯದಲ್ಲಿಯೇ ನೇಮಕಾತಿ ಪ್ರಾರಂಭಗೊಂಡು ಸಮಸ್ಯೆ ನಿವಾರಣೆಯಾಗುವ ಭರವಸೆ ನೀಡಿದರು.
ಹಿರೇಬಿಲಗುಂಜಿ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯನ್ನು ಸದುಪಯೋಗಪಡಿಸಿಕೊಂಡ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ ಅವರು, ಈ ಸಾಲಿನಲ್ಲಿ 50 ಲಕ್ಷಕ್ಕೂ ಅಧಿಕ ಹೆಚ್ಚಿನ ಹಣವನ್ನು ಬಳಸಿಕೊಂಡು ಕೆರೆ ಕಾಲುವೆ ನಿರ್ಮಾಣ, ಕೆರೆಕೋಡಿ ದುರಸ್ತಿ, ರಸ್ತೆ ಚರಂಡಿ ದುರಸ್ತಿ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಿ ಒಂದು ಕುಟುಂಬದಲ್ಲಿ 100 ದಿನ ಕಳೆದಿದ್ದರೆ ಅಂತಹ ಕುಟುಂಬಗಳಿಗೆ ಹೊಸದೊಂದು ಜಾಬ್ ಕಾರ್ಡ್ ನೀಡಿ ಕೆಲಸಕ್ಕೆ ಅನುವುಮಾಡಿಕೊಡುವುದರೊಂದಿಗೆ ಕೆಲಸದ ಸಂಬಳವನ್ನು ಒಂದು ವಾರದೊಳಗೆ ಪಾವತಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ರೈತರಿಗೆ 94ಸಿ ಅಡಿಯಲ್ಲಿ ಅರ್ಜಿ ಹಾಕಿಸಿ ಕೆಲವೇ ದಿನಗಳಲ್ಲಿ ಹಕ್ಕುಪತ್ರ ನೀಡುವ ಉದ್ದೇಶದಿಂದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡುತಿದ್ದು ನಿವೇಶನ ರೈತರ ಪಟ್ಟಿ ಹಾಗೂ ವಸತಿ ರೈತರ ಪಟ್ಟಿಯನ್ನು ಕೂಡಲೇ ಕಳುಹಿಸಿಕೊಡಬೇಕೆಂದು ಈ ಸಂದರ್ಭದಲ್ಲಿ ಆದೇಶಿಸಿದರು.
ಹಿರೇಬಿಲಗುಂಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಲಕ್ಷ್ಮೀ ರಾಧಾಕೃಷ್ಣ, ಉಪಾಧ್ಯಕ್ಷರಾದ ರತ್ಮಮ್ಮ ಬಸವರಾಜ್, ಹಾಗೂ ಗ್ರಾಮ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಸದಸ್ಯರು, ಸ್ಥಳೀಯ ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

