ಸೂಕ್ತ ರಕ್ಷಣೆಗೆ ಆಗ್ರಹಿಸಿ ಮನವಿ
ಶಿವಮೊಗ್ಗ: ಭದ್ರಾವತಿ ತಾಲೂಕಿನ ಭದ್ರಾಪುರದಲ್ಲಿ ಕೆಲ ದಿನಗಳ ಹಿಂದೆಯಷ್ಟೇ ನಡೆದ ಒಂದೇ ಕುಟುಂಬದ ಮೂವರು ಸಹೋದರರ ಕೊಲೆ ಪ್ರಕರಣದಿಂದ ಇಡೀ ಗ್ರಾಮವೇ ಭಯಗೊಂಡಿದೆ. ಹಾಗಾಗಿ ಜಿಲ್ಲಾಡಳಿತ ಸೂಕ್ತ ರಕ್ಷಣೆ ನೀಡಬೇಕು ಎಂದು ಭದ್ರಾಪುರ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಗ್ರಾಮದಲ್ಲಿ ಇಂತಹ ಘಟನೆಗಳು ಕಳೆದ ಕೆಲ ವರ್ಷಗಳಿಂದ ನಡೆಯುತ್ತಲೇ ಇದೆ. 2002ರಲ್ಲಿ ಇದೇ ಗ್ರಾಮದ ಜಮೀನಿನ ಬದುವಿನ ವಿಚಾರವಾಗಿ ಹೊನ್ನಪ್ಪನ ಮಗ ಹುಚ್ಚಂಗಪ್ಪ ಎಂಬುವರ ಕೊಲೆ ಮಾಡಿದವರು 5-6 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿ ಹೊರಬಂದಿದ್ದಾರೆ. ಇದರಿಂದ ಕಾನೂನಿನಲ್ಲಿ ಯಾವುದೇ ಬಂದೋಬಸ್ತು ಇಲ್ಲ ಎಂಬ ಭಾವನೆ ಜನರಲ್ಲಿ ಮೂಡಿತ್ತು. ಇದೀಗ ಅದೇ ರೀತಿ ಜಿಲ್ಲೆಯೇ ಬೆಚ್ಚಿಬಿಳುವಂತೆ ಮೂವರು ಸಹೋದರರ ಕೊಲೆ ನಡೆದಿದೆ.
ಇದರಿಂದ ಗ್ರಾಮದ ಮಹಿಳೆಯರು, ಮಕ್ಕಳು, ಯುವಕರು, ಎಲ್ಲಾ ಜನರಲ್ಲಿ ಭಯ ಉಂಟಾಗಿದೆ. ಕೃಷಿ ಚಟುವಟಿಕೆ ಮತ್ತು ಇತರೆ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಗ್ರಾಮದಲ್ಲಿ ಇಂತಹ ಪ್ರಕರಣಗಳು ಮುಂದೆಯೂ ನಡೆಯುವ ಎಲ್ಲಾ ಸಂಭವ ಇದೆ. ಇದನ್ನೆಲ್ಲಾ ಕಂಡ ಗ್ರಾಮಸ್ಥರು ಕೊಲೆ ಮಾಡಿದವರಿಗೆ ಕಾನೂನು ರೀತಿಯ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮುಂದಿನ ದಿನಗಳಲ್ಲಿ ಇಂತಹ ಘಟನೆ ನಡೆಯದಂತೆ ಕ್ರಮಕೈಗೊಳ್ಳಬೇಕು ಎಂದು ಭದ್ರಾಪುರ ಗ್ರಾಮಸ್ಥರು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

