ಶಿವಮೊಗ್ಗ

ಕಾರ್ಯದರ್ಶಿಗಳಿಗೆ ತರಬೇತಿ ಶಿಬಿರ

Published On :

ಕ.ಪ್ರ.ವಾರ್ತೆ , ಶಿವಮೊಗ್ಗ  ,  ಆ.9
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಶಿವಮೊಗ್ಗ ಸಹಕಾರಿ ಹಾಲು ಒಕ್ಕೂಟ ಹಾಗೂ ಸಹಕಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 13ರಂದು ಬೆಳಿಗ್ಗೆ 10.30 ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಸಭಾಂಗಣದಲ್ಲಿ ಶಿವಮೊಗ್ಗ ಉಪವಿಭಾಗದಲ್ಲಿರುವ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ಸಹಕಾರ ಕಾಯ್ದೆ ತಿದ್ದುಪಡಿ-2012ರ ಕುರಿತು ಒಂದು ದಿನದ ತರಬೇತಿ ಶಿಬಿರ ಏರ್ಪಡಿಸಲಾಗಿದೆ.
ಕಾರ್ಯಾಗಾರವನ್ನು ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಡಾ.ಆರ್.ಎಂ. ಮಂಜುನಾಥಗೌಡ ಉದ್ಘಾಟಿಸುವರು. ಶಾಸಕ ಕೆ.ಬಿ.ಪ್ರಸನ್ನಕುಮಾರ್, ಶಾರದಾ ಪೂರ್ಯಾನಾಯ್ಕ ವಿಶೇಷ ಆಹ್ವಾನಿತರಾಗಿ ಆಗಮಿಸಲಿರುವರು.
ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಡಿ. ಭೂಕಾಂತ್ ಅಧ್ಯಕ್ಷತೆ ವಹಿಸುವರು. ಸಹಕಾರ ಸಂಘಗಳ ಅಪರ ನಿಬಂಧಕ ಎಚ್.ಎಸ್. ನಾಗರಾಜಯ್ಯ, ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ ಕೆ.ಎಲ್. ಜಗದೀಶ್ವರ, ರಾಜ್ಯ ಸಹಕಾರ ತೋಟಗಾರಿಕಾ ಬೆಳೆಗಾರರ ಉತ್ಪನ್ನ ಮಾರಾಟ ಮಹಾಮಂಡಳದ ನಿರ್ದೇಶಕ ಉಂಬ್ಳೇಬೈಲು ಮೋಹನ್, ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮದ ನಿರ್ದೇಶಕ ಎಚ್.ವಿ. ರವಿಕುಮಾರ್, ಜಿಲ್ಲಾ ಸಹಕಾರ ಸಂಘದ ಮಾಜಿ ಅಧ್ಯಕ್ಷ ಎಸ್.ಕೆ. ಮರಿಯಪ್ಪ, ಸಹಕಾರ ಸಂಘಗಳ ಉಪನಿಬಂಧಕ ಎಚ್.ಎಸ್. ಸಂತೋಷಕುಮಾರ್, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪನಿರ್ದೇಶಕ ಜಿ.ಸಿ. ಜನಾರ್ದನ್ ಸೇರಿದಂತೆ ಹಾಲು ಒಕ್ಕೂಟ ಮತ್ತು ಸಹಕಾರ ಯೂನಿಯನ್‌ನ ನಿರ್ದೇಶಕರು ಮುಖ್ಯ ಅತಿಥಿಯಾಗಿ ಆಗಮಿಸಲಿರುವರು. ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಕೆ.ಆರ್. ಗಣಪತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಎಸ್.ಕೆ. ಉಪಸ್ಥಿತರಿರುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.