ರಸ್ತೆ ಅಪಘಾತ: ಸಿಓಡಿ ಡಿವೈಎಸ್ಪಿ ಸಾವು
ಶಿವಮೊಗ್ಗ: ಹೊಳೆಹೊನ್ನೂರು ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ಸಿಓಡಿ ಡಿವೈಎಸ್ಪಿ ಕೆ. ರವಿಪ್ರಕಾಶ್‌ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಪತ್ನಿ ರಾಧ ಹಾಗೂ ಪುತ್ರಿ ಋತಿಕಾ ಅವರು ಗಾಯಗೊಂಡಿದ್ದಾರೆ.
ಕೆ. ರವಿಪ್ರಕಾಶ್ (55) ಶಿಕಾರಿಪುರ ತಾಲೂಕಿನ ಉಡುಗಣಿಯವರಾಗಿದ್ದು, ಶುಕ್ರವಾರ ಮಧ್ಯಾಹ್ನ 2.15ರ ಸುಮಾರಿಗೆ ಹೊಳೆಹೊನ್ನೂರು ಸಮೀಪ ಅವರು ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ರವಿಪ್ರಕಾಶ್ ಅವರ ಪತ್ನಿ ರಾಧ ಅವರ ಮುಖಕ್ಕೆ ಗಾಯಗಳಾಗಿದ್ದು, ಮಗಳು ಋತಿಕಾಳ ತಲೆಯ ಹಿಂಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದೆ. ಇವರಿಬ್ಬರನ್ನೂ ಆಸ್ಪತ್ರೆಗೆ ಸೇರಿಸಲಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ.
ರವಿಕುಮಾರ್ 1990ನೇ ಬ್ಯಾಚ್‌ನ ಪಿಎಸ್‌ಐಯಾಗಿ ಪೊಲೀಸ್ ಇಲಾಖೆಗೆ ಸೇರಿದ್ದರು. ಹೆಚ್ಚಿನ ಸೇವೆಯನ್ನು ಬೆಂಗಳೂರಿನಲ್ಲಿ ಕಳೆದ ಅವರು ಹಾಸನದಲ್ಲಿ ಡಿವೈಎಸ್ಪಿಯಾಗಿ ಕಾರ್ಯ ನಿರ್ವಹಿಸಿ ನಂತರ ಬೆಂಗಳೂರಿನ ಸಿಸಿಬಿ ಡಿವೈಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದರು. ಬಳಿಕ ಸಿಓಡಿ ವಿಶೇಷ ತನಿಖಾ ದಳದಲ್ಲಿ ಡಿವೈಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

