ಶಿವಮೊಗ್ಗ

'ಸಂಧಾನ ಫಲ ನೀಡದ ಕಾರಣ ಚುನಾವಣೆ ಅನಿವಾರ್ಯ'

Published On :

ಕ.ಪ್ರ.ವಾರ್ತೆ  ,  ಶಿವಮೊಗ್ಗ  ,   ಆ.10
ಸಂಧಾನದ ಎಲ್ಲಾ ಪ್ರಯತ್ನ ಫಲ ನೀಡದ ಕಾರಣ,  ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಅನಿವಾರ್ಯವಾಯಿತು. ಎಲ್ಲೆಡೆ ಒತ್ತಾಯ ಮಾಡಿದ್ದರಿಂದ ಕಣಕ್ಕಿಳಿದಿದ್ದೇನೆ ಎಂದು ಅಧ್ಯಕ್ಷ ಸ್ಥಾನ ಆಕಾಂಕ್ಷಿ ರಘುರಾಮ ದೇವಾಡಿಗ ಹೇಳಿದ್ದಾರೆ.
ಚುನಾವಣೆ ನಂತರ ಸೋತವರು, ಗೆದ್ದವರು ಎಂಬ ಬೇಧವಿಲ್ಲದೇ ಎಲ್ಲರನ್ನೂ ಒಟ್ಟಾಗಿ ಸಂಘಟನೆ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದಿದ್ದಾರೆ.
ಈ ಸಂಬಂಧ ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು, ಸಂಘದ ನೂತನ ಕಟ್ಟಡದಲ್ಲಿ ಇ-ಲೈಬ್ರರಿ, 300 ಆಸನಗಳ ಹವಾನಿಯಂತ್ರಿತ ಸಭಾಂಗಣ ನಿರ್ಮಿಸುವ ಉದ್ದೇಶವಿದೆ. ಸರ್ಕಾರಿ ನೌಕರರ ವಸತಿ ಸಹಕಾರ ಸಂಘ ಸ್ಥಾಪಿಸಿ ಅತಿ ಕಡಿಮೆ ದರದಲ್ಲಿ ನಿವೇಶನ ಹಂಚುವ ಗುರಿ ಇದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರರ ನಡುವೆ ಇರುವ ವೇತನ ತಾರತಮ್ಯ ನಿವಾರಣೆಗೆ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.
ಕಾನೂನು ಕೋಶ ರಚನೆಗೆ ಯತ್ನ: ಜಿಲ್ಲೆಯ ಸರ್ಕಾರಿ ನೌಕರರ ಕುಂದುಕೊರತೆ ಬಗೆಹರಿಸಲು ಕಾನೂನು ಕೋಶ ರಚಿಸಲಾಗುವುದು. ಗುಣಾತ್ಮಕ ಶಿಕ್ಷಣ ನೀಡಲು ಶ್ರಮಿಸಲಾಗುವುದು. ಕೆಇಬಿ ವೃತ್ತದಲ್ಲಿರುವ ಸಂಘದ ನಿವೇಶನದಲ್ಲಿ ಸರ್ಕಾರಿ ನೌಕರರಿಗೆ ಅನುಕೂಲವಾಗುವಂತೆ ಸುಸಜ್ಜಿತ ಸಮುದಾಯ ಭವನ ನಿರ್ಮಿಸಲಾಗುವುದು ಎಂದರು. ಪ್ರಮುಖರಾದ ಮ.ಸ. ನಂಜುಂಡಸ್ವಾಮಿ, ರಮೇಶ್, ಹೊಳೆಲಿಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.