ಸಮಾಜದ ಕಡೆ ವ್ಯಕ್ತಿಗೂ ಕಾನೂನು ತಲುಪಿಸಿ: ಶಾಸಕ ಪ್ರಸನ್ನಕುಮಾರ್
ಕ.ಪ್ರ.ವಾರ್ತೆ ಶಿವಮೊಗ್ಗ ಆ.12
ಕಾನೂನು ಸಮರ್ಪಕವಾಗಿ ಅನುಷ್ಠಾನವಾಗದಿದ್ದರೆ ಹೋರಾಟಗಳು ಅನಿವಾರ್ಯ. ಇಂತಹ ಹಲವು ಹೋರಾಟ ಕೈಗೊಂಡಿರುವ ದಸಂಸ ಗುರುಮೂರ್ತಿ ಅವರಿಗೆ ಸಮಾಜದಲ್ಲಿ ಬದಲಾವಣೆ ತರುವ ಶಕ್ತಿ ಹಾಗೂ ದಲಿತರಿಗೆ ಸಹಾಯ ಮಾಡುವ ಸಹೃದಯತೆ ಇದೆ ಎಂದು ಶಾಸಕ ಕೆ.ಬಿ. ಪ್ರಸನ್ನಕುಮಾರ್ ತಿಳಿಸಿದರು.
ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಕರ್ನಾಟಕ ದಲಿತ ಸಂಘರ್ಷ ರಾಜ್ಯ ಸಂಘಟನಾ ಸಂಚಾಲಕ ಎಂ. ಗುರುಮೂರ್ತಿ ಅವರ 50ನೇ ಹುಟ್ಟುಹಬ್ಬ ಪ್ರಯುಕ್ತ ಹಮ್ಮಿಕೊಂಡಿದ್ದ ಉಚಿತ ರಕ್ತ ತಪಾಸಣೆ ಹಾಗೂ ರಕ್ತದಾನ ಶಿಬಿರ ಉದ್ಘಾಟಿಸಿ, ಸ್ವಾತಂತ್ರ್ಯಾನಂತರ ಬಹಳಷ್ಟು ಕಾನೂನು ಕಡತದಲ್ಲಿಯೇ ಉಳಿದಿವೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಅವುಗಳ್ನು ತಲುಪಿಸುವುದು ಸರ್ಕಾರ ಮತ್ತು ಅಧಿಕಾರಿಗಳ ಕರ್ತವ್ಯ. ಆದರೆ ಅಧಿಕಾರಿಗಳು ಅನುಷ್ಠಾನಕ್ಕೆ ತಾರದ ಸಂದರ್ಭದಲ್ಲಿ ಗುರುಮೂರ್ತಿ ಅವರಂತವರ ಅವಶ್ಯಕತೆ ಇದೆ ಎಂದರು.
ದಲಿತರ ಸೇವೆ: ಹುಟ್ಟುಹಬ್ಬದ ಪ್ರಯುಕ್ತ ಸನ್ಮಾನ ಸ್ವೀಕರಿಸಿದ ಎಂ. ಗುರುಮೂರ್ತಿ, ಅಂಬೇಡ್ಕರ್ ರಚಿಸಿದ ಸಂವಿಧಾನ ಹಾಗೂ ಪ್ರೊ. ಬಿ. ಕೃಷ್ಣಪ್ಪಾಜಿ ಅವರು ಹಾಕಿಕೊಟ್ಟಿರುವ ಮಾರ್ಗದಲ್ಲಿ ನಾನು ದಲಿತರ, ಶೋಷಿತರ ಸೇವೆ ಮಾಡುತ್ತಿದ್ದೇನೆ. ಕಾರ್ಯಕರ್ತರ ಅಭಿಮಾನಕ್ಕೆ ಓಗೊಟ್ಟು ಈ ಜನ್ಮದಿನಾಚರಣೆಗೆ ಒಪ್ಪಿಕೊಂಡಿದ್ದೇನೆ. ಹುಟ್ಟುಹಬ್ಬವನ್ನು ಸಮಾಜಮುಖಿಯಾಗಿ ಆಚರಿಸುವ ಉದ್ದೇಶದಿಂದ ಈ ರಕ್ತದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ರಾಜ್ಯ ಪರಿಶಿಷ್ಟ ಜಾತಿ ಮತ್ತು ವರ್ಗಗಳ ನೌಕರರ ಒಕ್ಕೂಟದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಬಸಪ್ಪ ಮಾತನಾಡಿದರು. ದಸಂಸ ಕಾರ್ಯಕರ್ತರು ರಕ್ತದಾನ ಮಾಡಿದರು. ಶಿವಪ್ಪನಾಯಕ ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ದೇಶಕ ಡಾ. ಗಂಗಾಧರ್, ರಾಜ್ಯ ರೈತಸಂಘದ ಕಾರ್ಯಾಧ್ಯಕ್ಷ ಕೆ.ಟಿ. ಗಂಗಾಧರ್, ಮೆಗ್ಗಾನ್ ಬೋಧನಾ ಆಸ್ಪತ್ರೆ ಸ್ಥಾನಿಕ ವೈದ್ಯಾಧಿಕಾರಿ ಡಾ. ಶಿವಯೋಗಿ ಇದ್ದರು. ಹಾಲೇಶಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಲೋಕನಾಥ್ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

