ಸ್ವಾತಂತ್ರ್ಯ ದಿನಾಚರಣೆ: ಸಕಲ ಸಿದ್ಧತೆ
ಶಿವಮೊಗ್ಗ: ನೆಹರೂ ಕ್ರೀಡಾಂಗಣದಲ್ಲಿ ಸಿಂಥೆಟಿಕ್ಟ್ರ್ಯಾಕ್ ಅಳವಡಿಸಿರುವುದರಿಂದ 67ನೇ ಸ್ವಾತಂತ್ರ್ಯ ದಿನೋತ್ಸವವನ್ನು ಶಿವಮೊಗ್ಗ ವೈದ್ಯಕೀಯ ಕಾಲೇಜು ಎದುರು ಇರುವ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪರೇಡ್ಮೈದಾನಕ್ಕೆ ಸ್ಥಳಾಂತರಿಸಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
ಈ ಮೈದಾನದಲ್ಲಿ ಗಣ್ಯರು, ಸ್ವಾತಂತ್ರ್ಯ ಹೋರಾಟಗಾರರು, ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಹಿರಿಯ ನಾಗರಿಕರು, ಸಾರ್ವಜನಿಕರಿಗೆ ಹಾಗೂ ಆಹ್ವಾನಿತರಿಗೆ ಪ್ರತ್ಯೇಕವಾಗಿ ಒಟ್ಟು 1,500 ಜನರಿಗೆ ಆಸನ ವ್ಯವಸ್ಥೆಯನ್ನು ಮಾಡಿದ್ದು, ಸಾರ್ವಜನಿಕರು ಮೈದಾನವನ್ನು 4 ಕಡೆಗಳಿಂದ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ. ಸಾಗರ ರಸ್ತೆಯ ಸಂಚಾರಿ ಪೊಲೀಸ್ ಠಾಣೆಯ ಆವರಣದೊಳಗಿಂದ ಪೊಲೀಸ್ ಠಾಣೆಯ ಪಕ್ಕದಲ್ಲಿ ವಿಶಾಲವಾದ ಪ್ರವೇಶವಿರುತ್ತದೆ. ಸಂಚಾರಿ ಪೊಲೀಸ್ ಠಾಣೆ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಚೇರಿಯ ಮಧ್ಯದ ರಸ್ತೆಯಲ್ಲಿ ಸಾಗಿ ಮೈದಾನದ ಪಕ್ಕದ ಹಾಗೂ ಹಿಂಬದಿ ಗೇಟ್ನಿಂದ ಸಾರ್ವಜನಿಕರು ಮೈದಾನವನ್ನು ಪ್ರವೇಶಿಸಲು ಅವಕಾಶವಿದೆ. ಈ ರಸ್ತೆಯ ಮುಖಾಂತರ ಸಾಗಿ ಹಿಂಭಾಗದ ಗೇಟ್ ಮುಖಾಂತರ ಗಣ್ಯರು ಹಾಗೂ ಅಧಿಕಾರಿಗಳು ಮೈದಾನ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ತಮ್ಮ ವಾಹನಗಳನ್ನು ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಚೇರಿಯ ಆವರಣದಲ್ಲಿ ನಿಲುಗಡೆ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಇಲ್ಲಿ ಸಾಕಷ್ಟು ವಾಹನಗಳಿಗೆ ನಿಲುಗಡೆ ಮಾಡಲು ಅವಕಾಶವಿದೆ. ಗಣ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ವಾಹನವನ್ನು ಮೈದಾನದ ಹಿಂಭಾಗದಲ್ಲಿ ನಿಲುಗಡೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಧ್ವಜಾರೋಹಣ ಕಾರ್ಯಕ್ರಮದ ನಂತರ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲು ಬಯಸುವ ಸಾರ್ವಜನಿಕರಿಗೆ ಮೀಸಲು ಪಡೆ ಸಭಾಂಗಣದಲ್ಲಿ ಅವಕಾಶ ಕಲ್ಪಿಸಲಾಗಿದೆ.
ಸಂಚಾರಿ ಪೊಲೀಸ್ ಠಾಣೆ ಹಾಗೂ ದೊಡ್ಡಪೇಟೆ ಪೊಲೀಸ್ ಠಾಣೆ ಹಿಂಭಾಗದಲ್ಲಿ ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಕಲ್ಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

