ಅಭಿವೃದ್ಧಿ ಪೂರಕ ಸಹಕಾರ ಕಾಯ್ದೆ
ಶಿವಮೊಗ್ಗ: ಎಲ್ಲಾ ರಾಜ್ಯಗಳಿಗೂ ಅನ್ವಯವಾಗುವಂತೆ ಸಹಕಾರ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು, ಇದು ಅಭಿವೃದ್ಧಿಗೆ ಪೂರಕವಾಗಿದೆ. ಇದನ್ನು ಅನುಸರಿಸಿದರೆ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯ ಎಂದು ರಾಜ್ಯ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ಸಿ.ಎಸ್. ವೀರೇಶ್ ಹೇಳಿದರು.
ನಗರದಲ್ಲಿ ಮಂಗಳವಾರ ರಾಜ್ಯ ಸಹಕಾರ ಮಹಾಮಂಡಳ ಹಾಗೂ ಸಹಕಾರ ಹಾಲು ಒಕ್ಕೂಟ ಹಮ್ಮಿಕೊಂಡಿದ್ದ ಜಿಲ್ಲಾ ಉಪ ವಿಭಾಗದಲ್ಲಿರುವ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ಸಹಕಾರ ಕಾಯ್ದೆ ತಿದ್ದುಪಡಿ- 2012 ಕುರಿತ ಜಿಲ್ಲಾ ವಿಶೇಷ ಸಹಕಾರ ತರಬೇತಿ ಶಿಬಿರ ಉದ್ಘಾಟಿಸಿದ ಅವರು, ಈ ಕಾಯ್ದೆ ಜಾರಿಯಾದ ನಂತರ ಸಹಕಾರ ಸಂಘ ಸ್ಥಾಪಿಸುವ ಹಕ್ಕು ಜನಸಾಮಾನ್ಯರಿಗೂ ಸಿಗುತ್ತದೆ. ಯಾರು ಬೇಕಾದರೂ ಸಹಕಾರ ಸಂಘ ಸ್ಥಾಪಿಸಬಹುದು ಎಂದರು. ಈ ಸಂವಿಧಾನ ತಿದ್ದುಪಡಿ ಅನ್ವಯ ಚುನಾವಣೆಯ ಎಲ್ಲಾ ಜವಾಬ್ದಾರಿಯನ್ನು ಸಹಕಾರ ಚುನಾವಣಾ ಆಯೋಗ ವಹಿಸಿಕೊಂಡಿದೆ ಎಂದರು. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಡಿ. ಭೂಕಾಂತ್, ನಿರ್ದೇಶಕ ಉಂಬ್ಳೆಬೈಲು ಮೋಹನ್, ಸಹಕಾರ ಸಂಘಗಳ ಉಪ ನಿಬಂಧಕ ಸಂತೋಷ್ ಕುಮಾರ್ ಇದ್ದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

