ಕರ್ತವ್ಯ ಪ್ರಜ್ಞೆ ಬೆಳೆಸಿಕೊಳ್ಳಿ: ಡಾ. ಉದಯ್‌ಕುಮಾರ್
ಸಾಗರ: ಸ್ವತಂತ್ರ್ಯ ಭಾರತದ ಪ್ರಜೆಗಳಾಗಿ ನಾವು ನಮ್ಮ ಹಕ್ಕುಗಳ ಜೊತೆಗೆ ಕರ್ತವ್ಯ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ಡಾ.ಬಿ. ಉದಯಕುಮಾರ್ ಶೆಟ್ಟಿ ಹೇಳಿದರು.
ಪಟ್ಟಣದ ನೆಹರೂ ಮೈದಾನದಲ್ಲಿ ಗುರುವಾರ ರಾಷ್ಟ್ರ ಧ್ವಜಾರೋಹಣ ಮಾಡಿ ಮಾತನಾಡಿದ ಅವರು, ಆರೋಗ್ಯವಂತ ಹಾಗೂ ಸದೃಢ ಜನತೆಯ ಮೂಲಕ ಭಾರತವನ್ನು ಕಟ್ಟುವ ಸಂಕಲ್ಪ ನಮ್ಮದಾಗಬೇಕು. ಸೌಹಾರ್ಧತೆ ಮೂಲಕ ದೇಶದ ಒಳಗಿನ ಹಾಗೂ ಹೊರಗಿನ ಶತೃಗಳನ್ನು ಎದುರಿಸುವ ಗುರಿ ನಮ್ಮದಾಗಬೇಕು ಎಂದು ಹೇಳಿದರು.
ರಾಜ್ಯ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಕಲ್ಯಾಣ ಸಮಾಜ ನಿರ್ಮಾಣದ ಉದ್ದೇಶ ಹೊಂದಿದೆ. ಜನರು ಈ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಸರ್ಕಾರದ ಉದ್ದೇಶವನ್ನು ಸಾರ್ಥಕಗೊಳಿಸಬೇಕು ಎಂದು ಹೇಳಿದರು.
ತಾಲೂಕು ಪಂಚಾಯ್ತಿ ಅಧ್ಯಕ್ಷ ಮಹಾಬಲೇಶ್ವರ ಕುಗ್ವೆ , ಅನೇಕ ಜನರ ತ್ಯಾಗಬಲಿದಾನದಿಂದಾಗಿ ನಮಗೆ ಸ್ವಾತಂತ್ರ್ಯ ದೊರಕಿದೆ. ಸ್ವಾತಂತ್ರ್ಯವನ್ನು ಸ್ವೇಚ್ಛಾಚಾರವಾಗಿ ಪರಿಗಣಿಸಬಾರದು. ನಮ್ಮ ಜವಾಬ್ದಾರಿ ಅರಿತು ದೇಶದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.
ತಹಶೀಲ್ದಾರ್ ಆರ್. ರಾಜಣ್ಣ, ಪೌರಾಯುಕ್ತ ಕೆ.ನರಸಿಂಹಮೂರ್ತಿ, ಪೇಟೆ ಠಾಣೆ ಸರ್ಕಲ್ ಇನ್ಸ್‌ಪೆಕ್ಟರ್ ಮಂಜಪ್ಪ, ಗ್ರಾಮಾಂತರ ಠಾಣೆ ಸರ್ಕಲ್ ಇನ್ಸ್‌ಪೆಕ್ಟರ್ ಓಂಕಾರ ನಾಯ್ಕಾ ಹಾಜರಿದ್ದರು. ನಂತರ ಆಕರ್ಷಕ ಕವಾಯತು ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

