'ಸ್ವೇಚ್ಛಾಚಾರವೇ ಸ್ವಾತಂತ್ರ್ಯವಲ್ಲ'
ಕ.ಪ್ರ.ವಾರ್ತೆ ಭದ್ರಾವತಿ ಆ.15
ಸ್ವಾತಂತ್ರ್ಯವೆಂದರೆ ಸ್ವೇಚ್ಛೆಯಿಂದ ವರ್ತಿಸುವುದೆಂಬ ಅರ್ಥವಲ್ಲ. ನಮ್ಮ ವರ್ತನೆಯಿಂದ ಇತರರ ಮನಸ್ಸಿಗೆ ನೋವಾಗುವಂತೆ ನಡೆದುಕೊಳ್ಳುವುದು ಮಾನವೀಯತೆ ಅಲ್ಲ ಎಂದು ಶಾಸಕ ಎಂ.ಜೆ. ಅಪ್ಪಾಜಿ ಹೇಳಿದರು. ಅವರು ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಪಟ್ಟಣದ ಕನಕ ಮಂಟಪ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ 67ನೇ ಸ್ವಾತಂತ್ರ್ಯ ದಿನಾಚರಣೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಂಜೂರಾತಿ ದೊರಕಬೇಕು: ಭದ್ರಾವತಿ ಕ್ಷೇತ್ರದ ಆರ್ಥಿಕ ಪರಿಸ್ಥಿತಿ ಕ್ಷೇತ್ರದ 2 ಪ್ರತಿಷ್ಠಿತ ಕಾರ್ಖಾನೆಗಳಾದ ವಿಐಎಸ್‌ಎಲ್ ಮತ್ತು ಎಂಪಿಎಂಗಳ ಸಂಕಷ್ಟದ ಸ್ಥಿತಿಯಿಂದ ಕಠಿಣವಾಗಿದೆ. ಎರಡೂ ಕಾರ್ಖಾನೆಗಳ ನವೀಕರಣವಾಗಬೇಕಿದೆ ಮತ್ತು ವಿಐಎಸ್‌ಎಲ್ ಕಾರ್ಖಾನೆಗೆ ಕಬ್ಬಿಣದ ಅದಿರಿನ ಗಣಿಯ ಮಂಜೂರಾತಿ ದೊರಕಬೇಕಾಗಿದೆ ಎಂದರು.
ತಹಸೀಲ್ದಾರ್ ಸಿದ್ದಮಲ್ಲಪ್ಪ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ದಿನೋತ್ಸವದ ಸಂದೇಶ ವಾಚಿಸಿದರು.
ಪೊಲೀಸ್, ಗೃಹರಕ್ಷಕ ದಳ, ಎನ್.ಸಿ.ಸಿ, ಶಾಲಾ ವಿದ್ಯಾರ್ಥಿಗಳು ಪಥಸಂಚಲನ ನಡೆಸಿದರು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ತಾಪಂ ಅಧ್ಯಕ್ಷೆ ಜಮರುದ್ ಖಾನು, ಉಪಾಧ್ಯಕ್ಷೆ ಗೌರಮ್ಮ, ಎಪಿಎಂಸಿ ಅಧ್ಯಕ್ಷ ಎಸ್. ಮಣಿಶೇಖರ್, ಉಪಾಧ್ಯಕ್ಷ ಲಕ್ಷ್ಮಣಪ್ಪ, ಜಿಪಂ ಸದಸ್ಯ ಎಸ್. ಕುಮಾರ್, ಪೌರಾಯುಕ್ತ ಬಿ.ಡಿ. ಬಸವರಾಜಪ್ಪ, ತಾಪಂ ಕಾರ್ಯನಿರ್ವಹಣಾಧಿಕಾರಿ ಎಂ. ಮಲ್ಲೇಶಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಸೋಮಶೇಖರಯ್ಯ, ಆರಕ್ಷಕ ವೃತ್ತ ನಿರೀಕ್ಷಕ ಪರಶುರಾಮಪ್ಪ ಮತ್ತು ಜೆ.ಜೆ.ತಿರುಮಲೇಶ್, ಅನೇಕ ಸ್ಥಳೀಯ ಪೊಲೀಸ್ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಮತ್ತು ಸ್ವಾತಂತ್ರ್ಯ ಹೋರಾಟಗಾರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

