ಪಿಂಚಣಿ ಅದಾಲತ್- 58 ಅರ್ಜಿಗಳ ವಿಲೇಗೆ ಕ್ರಮ
ಸಾಗರ: ರಾಜ್ಯ ಸರ್ಕಾರದ ನಿರ್ದೇಶನದಂತೆ ತಾಲೂಕಿನ ನಾಲ್ಕು ಹೋಬಳಿಗಳಲ್ಲಿ ಪಿಂಚಣಿ ಅದಾಲತ್ ನಡೆಸಿ ಸಾಮಾಜಿಕ ಭದ್ರತೆಗೆ ಸಂಬಂಧಪಟ್ಟಂತೆ ಸುಮಾರು 58 ಅರ್ಜಿಗಳನ್ನು ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಉಪವಿಭಾಗಾಧಿಕಾರಿ ಡಾ. ಉದಯಕುಮಾರ್ ಶೆಟ್ಟಿ ಹೇಳಿದರು.
ಇಲ್ಲಿನ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಅರ್ಜಿ ಸ್ವೀಕರಿಸಿ, ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ಅಂಗವಿಕಲ ವೇತನ, ವಿಧವಾ ವೇತನಕ್ಕೆ ಸಂಬಂಧಪಟ್ಟಂತೆ ತಾಲೂಕಿನ ಆನಂದಪುರಂನಲ್ಲಿ 58, ತಾಳಗುಪ್ಪದಲ್ಲಿ 12, ಆವಿನಹಳ್ಳಿಯಲ್ಲಿ 22 ಹಾಗೂ ಕಸಬಾದಲ್ಲಿ 26 ಅರ್ಜಿಗಳನ್ನು ಪಡೆಯಲಾಗಿದೆ ಎಂದರು.
ಸ್ಥಳದಲ್ಲಿಯೇ ವಿಲೇವಾರಿ: ಸ್ಥಳದಲ್ಲಿಯೆ ಅರ್ಜಿಯನ್ನು ಪರಿಶೀಲಿಸಿ ತಕ್ಷಣ ವಿಲೇವಾರಿಗೆ ಸೂಚನೆ ನೀಡಲಾಗಿದೆ. ಅನೇಕ ಸಂದರ್ಭದಲ್ಲಿ ಅರ್ಜಿದಾರರು ಸಾಮಾಜಿಕ ಭದ್ರತಾ ಯೋಜನೆಗಳನ್ನು ಪಡೆಯುವಾಗ ಸೂಕ್ತ ದಾಖಲೆಗಳನ್ನು ನೀಡಿರುವುದಿಲ್ಲ. ಇಂತಹ ಅದಾಲತ್ಗಳನ್ನು ಹಮ್ಮಿಕೊಳ್ಳುವುದರಿಂದ ಅವರಿಗೆ ಸೂಕ್ತ ಮಾಹಿತಿ ಸಿಗುವಂತೆ ಆಗುತ್ತದೆ ಎಂದರು.
ರಾಜ್ಯ ಸರ್ಕಾರದ ಮಹತ್ವದ ಕಾರ್ಯಕ್ರಮಗಳಲ್ಲಿ ಒಂದಾಗಿರುವ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಪಡೆಯಲು ಜನರ ಬಳಿಗೆ ಆಡಳಿತ ಹೋಗುವ ವಿಶೇಷ ವ್ಯವಸ್ಥೆ ಇದಾಗಿದೆ. ಅರ್ಹರು ಅರ್ಜಿ ಸಲ್ಲಿಸಿ ತಿಂಗಳುಗಟ್ಟಲೆ ಕಾಯುವುದನ್ನು ತಪ್ಪಿಸಲು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಅದಾಲತ್ ಸಂದರ್ಭದಲ್ಲಿ ಹಾಜರಿದ್ದು, ಸೂಕ್ತ ಮಾಹಿತಿಯನ್ನು ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ಇಂತಹ ಜನಸ್ನೇಹಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಶಿರಸ್ತೆದಾರ್ ಮಂಜುಳಾ ಭಜಂತ್ರಿ, ಕಂದಾಯ ಇಲಾಖೆಯ ಆನಂದ ನಾಯ್ಕ್, ಜಿ. ಬಸವರಾಜ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

