ವಲಯ ಮಟ್ಟದ ಕ್ರೀಡಾಕೂಟ
ಶಿವಮೊಗ್ಗ: ಆ. 23 ಮತ್ತು 24ರಂದು ಮಾಚೇನಹಳ್ಳಿ ಜಯಂತಿ ಗ್ರಾಮದ ಕೆಎಸ್ಆರ್ಪಿ ಮೈದಾನದಲ್ಲಿ ಪ್ರಸಕ್ತ ಸಾಲಿನ ನಿದಿಗೆ-ಬಿ. ಬೀರನಹಳ್ಳಿ ವಲಯ ಮಟ್ಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ 14ವರ್ಷ ವಯೋವುತಿಯೊಳಗಿನ ಬಾಲಕ-ಬಾಲಕಿಯರ ಕ್ರೀಡಾಕೂಟ ಏರ್ಪಡಿಸಲಾಗಿದೆ.ಜಿಪಂ, ತಾಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ಗ್ರಾಪಂ ಬಿದರೆ ಸಂಯುಕ್ತ ಆಶ್ರಯದಲ್ಲಿ ಆಯೋಜನೆಗೊಂಡ ಕ್ರೀಡಾಕೂಟವನ್ನು ಆ. 23ರಂದು ಬೆಳಗ್ಗೆ 9ಗಂಟೆಗೆ ಶಾಸಕಿ ಶಾರದಾ ಪೂರ್ಯಾನಾಯ್ಕ ಉದ್ಘಾಟಿಸುವರು. ಕೆ.ಎಸ್.ಆರ್.ಪಿ. ಕಮಾಂಡೆಂಟ್ ನಾಗಪ್ಪ, ಜಿಪಂ ಸದಸ್ಯ ಕೆ.ಬಿ. ಅಶೋಕನಾಯ್ಕ, ತಾಪಂ ಸದಸ್ಯ ಸೋಮಶೇಖರ್, ಗ್ರಾಪಂ ಅಧ್ಯಕ್ಷೆ ಶಾಂತಮ್ಮ ಲಕ್ಷ್ಮಣಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಕಮಲಾಕರ್, ಗ್ರಾ ಪಂ ಸದಸ್ಯ ಎಂ. ಮಾಯಣ್ಣ ಮುಂತಾದವರು ಆಗಮಿಸಲಿರುವರು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು,ಗ್ರಾಮಸ್ಥರು ಉಪಸ್ಥಿತರಿರುವರು.
ಸ್ವಯಂ ಉದ್ಯೋಗ; ಅರ್ಜಿ ಆಹ್ವಾನ
ಶಿವಮೊಗ್ಗ: ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಪ್ರಸಕ್ತ ಸಾಲಿನ ರಾಷ್ಟ್ರೀಯ ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ನೇರಸಾಲ ಯೋಜನೆಯಡಿಯಲ್ಲಿ ಸ್ವಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯಗಳನ್ನು ಕಲ್ಪಿಸಲು ಉದ್ದೇಶಿಸಿದ್ದು, ಜಿಲ್ಲೆಯ ಅರ್ಹ ಮತೀಯ ಅಲ್ಪಸಂಖ್ಯಾತ ವರ್ಗದ ನಿರುದ್ಯೋಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅವಧಿಸಾಲ ಯೋಜನೆಯಡಿಯಲ್ಲಿ ಕೃಷಿ, ತೋಟಗಾರಿಕೆ, ನೀರಾವರಿ ಕ್ಷೇತ್ರಗಳು ಸೇರಿದಂತೆ ಎಲ್ಲಾ ವ್ಯಾಪಾರಿ ಚಟುವಟಿಕೆಗಳು ಹಾಗೂ ವಾಹನ ಇವುಗಳಿಗೆ ರು. 1 ಲಕ್ಷ ರುಪಾಯಿವರೆಗೆ ಸಾಲಸೌಲಭ್ಯ ಒದಗಿಸಲಾಗುವುದು. ವೃತ್ತಿಪರ ಸ್ನಾತಕೋತ್ತರ ಪದವಿ ಅಧ್ಯಯನ ವಿದೇಶದಲ್ಲಿ ವ್ಯಾಸಂಗ ಮತ್ತಿತರ ಶೈಕ್ಷಣಿಕ ಕೋರ್ಸ್ಗಳನ್ನು ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಗರಿಷ್ಠ ರು. 5 ಲಕ್ಷದವರೆಗೆ ಸಾಲಸೌಲಭ್ಯ ಒದಗಿಸಲಾಗುವುದು. ಆಸಕ್ತರು ಅರ್ಜಿಯನ್ನು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪರಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಆ.29ರೊಳಗೆ ತುಂಬಿದ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

