ಶಿವಮೊಗ್ಗ

ಅರ್ಜಿ ಆಹ್ವಾನ

Published On :

ಶಿವಮೊಗ್ಗ: ಭದ್ರಾವತಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಲಭ್ಯವಿರುವ ವಿವಿಧ ವೃತ್ತಿಗಳಲ್ಲಿ ಖಾಲಿ ಇರುವ 119 ಸ್ಥಾನಗಳಿಗೆ ಎಸ್ಎಸ್ಎಲ್ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆ.23ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆ.24ರಂದು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ಭದ್ರಾವತಿಯ ಸರ್ಕಾರಿ ಕೈಗಾರಿಕಾ ಕೇಂದ್ರದ ಪ್ರಾಚಾರ್ಯರನ್ನು ಸಂಪರ್ಕಿಸಬಹುದು.
ಆಕ್ಷೇಪಣೆ ಆಹ್ವಾನ
ಶಿವಮೊಗ್ಗ: ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ಉಪನಿರ್ದೇಶಕರ ಸರ್ಕಾರಿ ಪತ್ರದಲ್ಲಿ ತಿಳಿಸಿರುವಂತೆ 2011ರ ಜನಗಣತಿಯಲ್ಲಿನ ಅಂಕಿಅಂಶದಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಹಾಗೂ ಇನ್ಸ್ಯಾನಿಟರಿ ಲ್ಯಾಟ್ರಿನ್ಗಳು ಅಸ್ತಿತ್ವದಲ್ಲಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಮಂತ್ರಾಲಯದ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಜು.10ರಿಂದ 18ರ ವರೆಗೆ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಹಾಗೂ ಇನ್ಸ್ಯಾನಿಟರಿ ಲ್ಯಾಟ್ರಿನ್ಗಳ ಅಸ್ತಿತ್ವದ ಸಮೀಕ್ಷೆಯನ್ನು ಮತ್ತು ಜುಲೈ 19ರಿಂದ 29ರವರೆಗೆ ಅದರ ಪರಿಶೀಲನೆಯನ್ನು ನಡೆಸಲಾಗಿದ್ದು, ಸ್ವಯಂ ಘೋಷಣೆಗೆ ನಗರಸಭೆಯಲ್ಲಿ ಪ್ರತ್ಯೇಕ ಕೇಂದ್ರವನ್ನು ತೆರೆಯಲಾಗಿದೆ.
ಈ ಮೂರು ಹಂತಗಳ ಸಮೀಕ್ಷೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಯಾವುದೇ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಗಳು ಹಾಗೂ ಇನ್ಸ್ಯಾನಿಟರಿ ಲ್ಯಾಟ್ರಿನ್ಗಳು ಕಂಡುಬಂದಿರುವುದಿಲ್ಲ. ಸಾರ್ವಜನಿಕರು ಈ ಬಗ್ಗೆ ಯಾವುದಾದರೂ ಆಕ್ಷೇಪಣೆಗಳು ಹಾಗೂ ಹಕ್ಕುಬಾದ್ಯತೆಗಳು ಇದ್ದಲ್ಲಿ ತಮ್ಮಲ್ಲಿರುವ ಸಾಕ್ಷ್ಯಾಧಾರಗಳೊಂದಿಗೆ ಆಗಸ್ಟ್ 24ರೊಳಗಾಗಿ ಉಪವಿಭಾಗಾಧಿಕಾರಿಗಳು, ಶಿವಮೊಗ್ಗ ಇವರಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಪೌರಾಯುಕ್ತರು ಹಾಗೂ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕ್ರಿಕೆಟ್, ಯೋಗ, ಚೆಸ್ ಪಂದ್ಯಾವಳಿ
ಶಿವಮೊಗ್ಗ: ಸಾರ್ವಜನಿಕ ಶಿಕ್ಷಣ ಇಲಾಖೆಯು ಭದ್ರಾವತಿ ನ್ಯೂಟೌನ್ನ ರಜತ ಮಹೋತ್ಸವ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಹಯೋಗದೊಂದಿಗೆ ಆ.23ರಂದು ಬೆಳಗ್ಗೆ 9 ಗಂಟೆಗೆ ಭದ್ರಾವತಿಯ ವಿ.ಐ.ಎಸ್.ಎಲ್. ಕ್ರೀಡಾಂಗಣದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ 14 ಮತ್ತು 16 ವರ್ಷ ವಯೋವುತಿಯೊಳಗಿನ ಶಾಲಾ ಬಾಲಕರ ನೇರ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಹಾಗೂ ಸಾಗರ ತಾಲೂಕು ಕಾರ್ಗಲ್ನ ಪ್ರೌಢಶಾಲೆಯ ಸಹಯೋಗದೊಂದಿಗೆ ಕಾರ್ಗಲ್ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ 14 ಮತ್ತು 17 ವರ್ಷದೊಳಗಿನ ಶಾಲಾ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ಯೋಗ,  ಚೆಸ್ ಪಂದ್ಯಾವಳಿಯನ್ನು ಏರ್ಪಡಿಸಿದೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.