ಶಿವಮೊಗ್ಗ

ಸಾಮಾಜಿಕ ನ್ಯಾಯ ಪ್ರತಿಷ್ಠಾಪಿಸಿದ ನಾಯಕ

Published On :

ಸಾಗರ: ಸಾಮಾಜಿಕ ನ್ಯಾಯ ಪ್ರತಿಷ್ಠಾಪಿಸಿದವರಲ್ಲಿ ಮಾಜಿ ಮುಖ್ಯಮಂತ್ರಿ ದೇವರಾಜು ಅರಸು ದೇಶದಲ್ಲಿಯೇ ಮೊದಲನೆ ಸಾಲಿನಲ್ಲಿ ನಿಲ್ಲುತ್ತಾರೆ ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು.
ಪಟ್ಟಣದ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ಡಿ. ದೇವರಾಜ ಅರಸು ಅವರ 98ನೇ ಜನ್ಮದಿನಾಚರಣೆ ಉದ್ಘಾಟಿಸಿ, ಅರಸುರವರು ರಾಜ್ಯಾಂಗ ಹಾಕಿಕೊಟ್ಟ ಸಮಾನತೆಯ ಮಾರ್ಗವನ್ನು ಜಾರಿಗೆ ತರುವಲ್ಲಿ ಶ್ರಮಿಸಿದ್ದಾರೆ ಎಂದರು.
ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದ ಜನಾಂಗಕ್ಕೆ ಮೀಸಲಾತಿ ನೀಡುವ ಉದ್ದೇಶದಿಂದ ಹಾವನೂರು ಆಯೋಗವನ್ನು ರಚಿಸಿದ ಅರಸುರವರು ತನ್ಮೂಲಕ ವರದಿಯನ್ನು ಅನುಷ್ಠಾನಗೊಳಿಸಿ ಹಿಂದುಳಿದ ವರ್ಗಕ್ಕೆ ಮೀಸಲಾತಿ ಸೌಲಭ್ಯ ಕಲ್ಪಿಸುವ ಮೂಲಕ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟಿದ್ದಾರೆ. ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಭೂಸುಧಾರಣೆ ಕಾಯ್ದೆಯನ್ನು ಜಾರಿಗೆ ತಂದು ಉಳುವವರಿಗೆ ಭೂಮಿ ಹಕ್ಕು ಕೊಡಿಸುವ ನಿಟ್ಟಿನಲ್ಲಿ ಗೇಣಿರೈತರ ಧ್ವನಿಯಾಗಿ ಕೆಲಸ ಮಾಡಿದ್ದಾರೆ ಎಂದು ವಿವರಿಸಿದರು.
ಉಪವಿಭಾಗಾಧಿಕಾರಿ ಡಾ. ಉದಯಕುಮಾರ್ ಸೆಟ್ಟಿ ಮಾತನಾಡಿ, ಅರಸು ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದ ಯೋಜನೆಗಳು ಇಂದಿಗೂ ಪ್ರಸ್ತುತವಾಗಿದೆ ಎಂದರು.
ಕಾಲೇಜಿನ ಸಹ ಪ್ರಾಧ್ಯಾಪಕ ಜಿ. ಸಣ್ಣಹನುಮಂತ್ಪಪ ದೇವರಾಜ ಅರಸು ಕುರಿತು ವಿಶೇಷ ಉಪನ್ಯಾಸ ನೀಡಿದರು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.