ಶಿವಮೊಗ್ಗ

ಸೆ.1ರಂದು ನ್ಯಾಯಬೆಲೆ ಅಂಗಡಿ ಬಂದ್

Published On :

ಕ.ಪ್ರ.ವಾರ್ತೆ  ಶಿವಮೊಗ್ಗ  ಆ.20
ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಪಡಿತರ ವಿತರಕರ ಸಂಘ ಸೆ.1ರಂದು ಜಿಲ್ಲೆಯಾದ್ಯಂತ ನ್ಯಾಯಬೆಲೆ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ಹಮ್ಮಿಕೊಂಡಿದೆ.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ರಾಜ್ಯ ಸರ್ಕಾರಿ ಪಡಿತರ ವಿತರಕ ಸಂಘದ ಅಧ್ಯಕ್ಷ ಟಿ. ಕೃಷ್ಣಪ್ಪ, ಸರ್ಕಾರ ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಿಸುತ್ತಿರುವ ಪ್ರತಿ ಕ್ವಿಂಟಲ್ ಅಕ್ಕಿಗೆ 31, ಗೋದಿಗೆ 25, ಸಕ್ಕರೆಗೆ 13.50, ಸೀಮೆಎಣ್ಣೆ ಪ್ರತಿ ಲೀಟರ್ಗೆ 50 ಪೈಸೆ ಕಮೀಷನ್ ನೀಡುತ್ತಿದೆ. ಈ ಕಮಿಷನ್ ಹಣದಿಂದ ನ್ಯಾಯಬೆಲೆ ಅಂಗಡಿ ಮಾಲೀಕರು ಜೀವನ ನಡೆಸುವುದು ದುಸ್ತರವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಚರ್ಚೆಗೆ ನಿರ್ದೇಶನ: ಕಮೀಷನ್ ಮತ್ತು ನಗರ ಪ್ರದೇಶದಲ್ಲಿ ಸಾಗಾಣಿಕೆ ವೆಚ್ಚ ನೀಡುವಂತೆ ಹಾಗೂ ಬಯೋವುಟ್ರಿಕ್ ನೀಡುವ ಬಗ್ಗೆ  ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದು, ಹೈಕೋರ್ಟ್ ಕೂಡ ಸಂಘದ ಬೇಡಿಕೆ ನ್ಯಾಯಸಮ್ಮತವಾಗಿದೆ ಎಂದಿದೆ
 ಈ ಬಗ್ಗೆ ಮುಕ್ತವಾಗಿ ಚರ್ಚಿಸಲು ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಆದರೆ, ಇದುವರೆಗೂ ಸರ್ಕಾರ ಸ್ಪಂದಿಸಿಲ್ಲ ಎಂದು ಆರೋಪಿಸಿದರು.
ಇದೀಗ ನೀಡುತ್ತಿರುವ ಕಮೀಷನ್ ಹಣ ಜೀವನ ನಿರ್ವಹಣೆಗೆ ಸಾಕಾಗುತ್ತಿಲ್ಲ. ಪ್ರತಿ ಕ್ವಿಂಟಲ್ ಅಕ್ಕಿ, ಗೋಧಿಗೆ 50, ಸೀಮೆಎಣ್ಣೆ ಪ್ರತಿ ಲೀಟರ್ಗೆ 1 ಹಾಗೂ ಸಕ್ಕರೆ ಕ್ವಿಂಟಲ್ಗೆ 100 ಕಮೀಷನ್ ನೀಡಬೇಕು ಎಂದು ಒತ್ತಾಯಿಸಿದರು.
ಕಮೀಷನ್ ಮತ್ತು ಸಾಗಾಣಿಕೆ ವೆಚ್ಚ ಹೆಚ್ಚು ಮಾಡದಿದ್ದಲ್ಲಿ, ಸಗಟು ಮಳಿಗೆಗಳಿಗೆ ಬಯೋವುಟ್ರಿಕ್ ಯಂತ್ರ ಅಳವಡಿಸದಿದ್ದಲ್ಲಿ ಸರ್ಕಾರಿ ಪಡಿತರ ವಿತರಕರ ಸಂಘದ ತೀರ್ಮಾನದಂತೆ ಸೆ.1ರಂದು ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಅವರು ಎಚ್ಚರಿಸಿದರು.
 ಸರ್ಕಾರ ಈ ಕೂಡಲೇ ಸಂಘದ ಮನವಿಯ ಬಗ್ಗೆ ಅಧಿಕಾರಿಗಳು ಮತ್ತು ಮಾಲೀಕರೊಂದಿಗೆ ಸಭೆ ಕರೆದು ಚರ್ಚಿಸಿ, ತೀರ್ಮಾನ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸಂಘದ ಅಧ್ಯಕ್ಷ ಎ. ಷಣ್ಮುಖಪ್ಪಗೌಡ, ಉಪಾಧ್ಯಕ್ಷ ಸಿದ್ದಲಿಗಂಯ್ಯ, ಕಾರ್ಯದರ್ಶಿ ಕೆ. ಈಶ್ವರಾಚಾರಿ, ನಟರಾಜ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.