ಶಿವಮೊಗ್ಗ

ಚುನಾವಣಾ ಪೂರ್ವ ಸಿದ್ಧತಾ ತರಬೇತಿ ಶಿಬಿರ

Published On :

ಕ.ಪ್ರ.ವಾರ್ತೆ  ಶಿವಮೊಗ್ಗ  ಆ.20
ಜಿಲ್ಲೆಯಲ್ಲಿ ನಡೆಯುವ ಸಹಕಾರ ಸಂಘಗಳ ಚುನಾವಣೆಗೆ ನಿಗದಿಯಾಗಿರುವ ಸಹಕಾರ ಸಂಘಗಳ ಕಾರ್ಯದರ್ಶಿ ಮತ್ತು ಚುನಾವಣಾಧಿಕಾರಿಗಳಿಗೆ ಮಂಗಳವಾರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸಭಾಂಗಣದಲ್ಲಿ ಚುನಾವಣಾ ಪೂರ್ವ ಸಿದ್ಧತಾ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ರಾಜ್ಯ ಸಹಕಾರ ಮಹಾಮಂಡಳಿ, ರಾಜ್ಯ ಸಹಕಾರ ಚುನಾವಣಾ ಆಯೋಗ, ಜಿಲ್ಲಾ ಸಹಕಾರ ಯೂನಿಯನ್, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ಸಹಕಾರ ಇಲಾಖೆಯಿಂದ ಆಯೋಜಿಸಿದ್ದ ಶಿಬಿರವನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಸಹಕಾರ ಸಂಘಗಳ ಉಪನಿಂಧಕ ಎಸ್.ಎಚ್. ಸಂತೋಷ್ ಕುಮಾರ್ ಉದ್ಘಾಟಿಸಿದರು.
15 ದಿನದೊಳಗೆ...: ನಂತರ ಮಾತನಾಡಿದ ಅವರು, ಈ ಶಿಬಿರ ಪ್ರಮುಖವಾಗಿ 2 ಪ್ರಮುಖ ಉದ್ದೇಶಗಳನ್ನು ಹೊಂದಿದೆ. ಪದಾಧಿಕಾರಿಗಳ ಆಯ್ಕೆ ಮಾಡುವ ಪ್ರಕ್ರಿಯೆ ಹಾಗೂ ಚುನಾವಣಾಧಿಕಾರಿಗಳು ಚುನಾವಣೆಯನ್ನು ಹೇಗೆ ಎದುರಿಸಬೇಕೆಂಬುದರ ಬಗ್ಗೆ ಪೂರ್ಣ ಮಾಹಿತಿ ನೀಡುವುದಾಗಿದೆ ಎಂದ ಅವರು, ಸಹಕಾರ ಸಂಘಗಳ ಚುನಾವಣೆ ಬಳಿಕ 15 ದಿನದ ಒಳಗೆ ಪದಾಧಿಕಾರಿಗಳ ಚುನಾವಣೆ ನಡೆಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿ 79 ಹಾಲು ಉತ್ಪಾದಕರ ಸಹಕಾರ ಸಂಘಗಳಿದ್ದು, ಅದರಲ್ಲಿ 75 ಸಂಘಗಳಿಗೆ ಅವಿರೋಧವಾಗಿ ಆಡಳಿತ ಮಂಡಳಿಯ ಸದಸ್ಯರು ಆಯ್ಕೆಯಾಗಿದೆ. ಇನ್ನುಳಿದಂತೆ ಸಾಗರ ಉಪ ವಿಭಾಗದ 4 ಸಂಘಗಳು, ಹೊರಬೈಲು, ಹೆಬೈಲು, ಅರಳೇಹಳ್ಳಿ ಮತ್ತು ಶಿರಾಳಕೊಪ್ಪ ಸಂಘಗಳಿಗೆ ಚುನಾವಣೆ ನಡೆಯಬೇಕಿದ್ದು, ಇದರಲ್ಲಿ ಅರಳೇಹಳ್ಳಿ ಹೊರತು ಪಡಿಸಿ ಇನ್ನುಳಿದವುಗಳಲ್ಲಿ ಸದಸ್ಯರು ಚುನಾವಣೆಗೆ ಆಸಕ್ತಿ ತೋರಿಸದ ಹಿನ್ನೆಲೆಯಲ್ಲಿ ಅಲ್ಲಿಗೆ ಆಡಳಿತ ಮಂಡಳಿ ನೇಮಿಸಲಾಗಿದೆ. ಇದೀಗ ಅರಳೇಹಳ್ಳಿಯಲ್ಲಿ ಚುನಾವಣೆ ನಡೆಯಬೇಕಿದೆ ಎಂದು ತಿಳಿಸಿದರು.
ಸಹಕಾರ ಕೇಂದ್ರ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಎನ್.ಜಿ. ನಾಗಭೂಷಣ್, ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಚ್. ತಿಮ್ಮಪ್ಪ, ಸಾಗರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಜಿ.ಎಸ್. ಜಯಪ್ರಕಾಶ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.