ಅಹವಾಲು ಸ್ವೀಕಾರ
ಶಿವಮೊಗ್ಗ: ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಮತ್ತು ಪೊಲೀಸ್ ಇನ್ಸ್ಪೆಕ್ಟರ್ ಆಗಸ್ಟ್ ಮಾಹೆಯ ನಿಗದಿತ ದಿನಾಂಕಗಳಂದು ಜಿಲ್ಲೆಯ ಎಲ್ಲ ತಾಲೂಕುಗಳ ಪ್ರವಾಸಿ ಮಂದಿರಗಳಲ್ಲಿ ಹಾಜರಿದ್ದು, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ದೂರನ್ನು ಕೆ.ಸಿ. ಪುರುಷೋತ್ತಮರವರು ಆಗಸ್ಟ್ 26ರಂದು ಬೆಳಿಗ್ಗೆ 10.30ರಿಂದ 1.30ರ ವರೆಗೆ ಹೊಸನಗರ, ಮಧ್ಯಾಹ್ನ 3 ರಿಂದ 5.30ರ ವರೆಗೆ ಸಾಗರ ಹಾಗೂ ಆ.28 ರಂದು ಬೆಳಿಗ್ಗೆ 10.30ರಿಂದ 1.30ರ ವರೆಗೆ ಭದ್ರಾವತಿಯಲ್ಲಿ, ಸಮೀವುಲ್ಲ ಕೆ. ಅವರು ಆ.27ರಂದು ಬೆಳಿಗ್ಗೆ 10.30ರಿಂದ 1.30ರ ವರೆಗೆ ಶಿಕಾರಿಪುರ, ಮಧ್ಯಾಹ್ನ 3ರಿಂದ 5.30ರ ವರೆಗೆ ಸೊರಬ. ಹಾಗೂ ಆ.29ರಂದು ಬೆಳಿಗ್ಗೆ 10.30ರಿಂದ 1.30ರ ವರೆಗೆ ತೀರ್ಥಹಳ್ಳಿ ಪ್ರವಾಸಿ ಮಂದಿರದಲ್ಲಿ ಹಾಜರಿದ್ದು, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು.
ಸಾರ್ವಜನಿಕರು ಸರ್ಕಾರಿ ಕಚೇರಿಗಳಲ್ಲಿ ತಮ್ಮ ಕೆಲಸಗಳ ಕುರಿತು ಆಗುತ್ತಿರುವ ಅನಗತ್ಯ ವಿಳಂಬ, ಮತ್ತಿತರ ಸಮಸ್ಯೆಗಳಿದ್ದಲ್ಲಿ ನಿಗದಿತ ದಿನಾಂಕ, ಸಮಯ ಮತ್ತು ಸ್ಥಳಗಳಲ್ಲಿ ಖುದ್ದಾಗಿ ಹಾಜರಿದ್ದು, ದೂರುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

