ಭ್ರಷ್ಟಾಚಾರದ ಕೊಂಪೆಯಾದ ಸರ್ಕಾರಿ ಕಾಲೇಜು
ಕ.ಪ್ರ.ವಾರ್ತೆ ಟಿ ಭದ್ರಾವತಿ ಟಿ ಆ.21
ಜಿಲ್ಲೆಯ ಪ್ರತಿಷ್ಠಿತ ಕಾಲೇಜುಗಳಲ್ಲೊಂದಾದ ಪಟ್ಟಣದ ಸರ್ ಎಂ.ವಿ. ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು ಭ್ರಷ್ಟಾಚಾರದ ಕೊಂಪೆಯಾಗಿದೆ ಎಂದು ಆರೋಪಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬುಧವಾರ ತರಗತಿ ಬಹಿಷ್ಕರಿಸಿ ಮುಷ್ಕರ ನಡೆಸಿದರು.
ಇತ್ತೀಚಿನ ದಿನಗಳಲ್ಲಿ ಕಾಲೇಜು ಸಮಸ್ಯೆಯ ಆಗರವಾಗಿದೆ. ಕಾಲೇಜು ಆಡಳಿತ ಮಂಡಳಿ ಸಮಸ್ಯೆ ಬಗೆಹರಿಸುವ ಬದಲಾಗಿ ಅವ್ಯವಹಾರ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿರುವುದು ಖಂಡನೀಯ ಎಂದು ಎಬಿವಿಪಿ ಕಾರ್ಯಕರ್ತರು ತಿಳಿಸಿದರು.
ಅಭಿವೃದ್ಧಿ ಹೆಸರಲ್ಲಿ ಲೂಟಿ: ಕಾಲೇಜಿನ ಆಡಳಿತ ಮಂಡಳಿ ಬಡವರು, ದೀನ- ದಲಿತರು ಎಂಬ ಕರುಣೆ ಇಲ್ಲದೆ ಕಾಲೇಜು ಅಭಿವೃದ್ಧಿಯ ಹೆಸರಿನಲ್ಲಿ ವಿದ್ಯಾರ್ಥಿಗಳಿಂದ ಹಣ ಲೂಟಿ ಮಾಡುತ್ತಿದೆ. ಅದನ್ನು ಕಾಲೇಜು ಅಭಿವೃದ್ಧಿಗೆ ಸರಿಯಾಗಿ ಬಳಸಿಕೊಳ್ಳದೇ ದುರುಪಯೋಗಪಡಿಸಿಕೊಂಡು ಭ್ರಷ್ಟಾಚಾರವೆಸಗಿದ್ದಾರೆ. ಕಾಲೇಜು ಅಭಿವೃದ್ಧಿಗೆ ಕಂಪ್ಯೂಟರ್, ಜನರೇಟರ್ ಖರೀದಿಯನ್ನು ಕಾನೂನು ಬಾಹಿರವಾಗಿ ಮಾಡಿ ಲಕ್ಷಾಂತರ ರು. ಭ್ರಷ್ಟಾಚಾರವೆಸಗಿದ್ದಾರೆ ಎಂದ ಆರೋಪಿಸಲಾಯಿತು.
ಕಟ್ಟಡ ಶುಲ್ಕವನ್ನೂ ಕೂಡಾ ಆಡಳಿತ ಮಂಡಳಿಯವರು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡು ಭ್ರಷ್ಟಾಚಾರವೆಸಗಿರುವುದನ್ನು ಎಬಿವಿಪಿ ವಿರೋಧಿಸುತ್ತದೆ ಎಂದು ಸಂಘಟನೆಯ ಮುಖ್ಯಸ್ಥರು ತಿಳಿಸಿದ್ದಾರೆ. ಕಳೆದ 3 ವರ್ಷಗಳಿಂದ ಸಂಗ್ರಹಿಸಿರುವ ಕಾಲೇಜು ಅಭಿವೃದ್ಧಿ ಲೆಕ್ಕಪತ್ರಗಳನ್ನು ನೀಡಬೇಕು. ಈ 3 ವರ್ಷಗಳಲ್ಲಿ ಆಗಿರುವ ಎಲ್ಲಾ ಖರೀದಿ ಲೆಕ್ಕಪತ್ರವನ್ನೂ ಸಮಗ್ರ ತನಿಖೆಗೆ ಒಳಪಡಿಸಬೇಕು ಮತ್ತು ಪ್ರಾಂಶುಪಾಲರನ್ನು ಅಮಾನತ್ತಿನಲ್ಲಿಟ್ಟು ತನಿಖೆ ನಡೆಸಬೇಕೆಂದು ಎಬಿವಿಪಿ ಒತ್ತಾಯಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

