ಕಾರ್ಯಪಡೆ ರಚಿಸಿ ಕಾರ್ಯೋನ್ಮುಖರಾಗಿ
ಭದ್ರಾವತಿ: ಕಳೆದೆರಡು ತಿಂಗಳಿನಿಂದ ಭದ್ರಾವತಿ ತಾಲೂಕಿನಲ್ಲಿ ಅತಿವೃಷ್ಟಿಯಿಂದಾಗಿ ಅಪಾರ ಬೆಳೆಹಾನಿಯಾಗಿದ್ದು, ತಾಲೂಕು ಆಡಳಿತ ಹಾನಿ ಪರಿಶೀಲಿಸಲು ಹಾಗೂ ರೈತರಿಗೆ ಸೂಕ್ತ ಪರಿಹಾರ ನೀಡಲು ತಹಸೀಲ್ದಾರರ ನೇತೃತ್ವದಲ್ಲಿ ತಾಲೂಕಿನ ವಿವಿಧ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನೊಳಗೊಂಡ ಕಾರ್ಯಪಡೆ ರಚಿಸಿ ತಕ್ಷಣವೇ ಕಾರ್ಯೋನ್ಮುಖವಾಗಬೇಕು ಇಲ್ಲವಾದಲ್ಲಿ ಬಿಜೆಪಿಯಿಂದ ಸರ್ಕಾರದ ವಿರುದ್ಧ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಪಕ್ಷದ ಮುಖಂಡರುಗಳು ಬುಧವಾರ ಬೆಳಗ್ಗೆ ತಹಸೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಕಳೆದೆರಡು ತಿಂಗಳಿನಿಂದ ಜಿಲ್ಲೆಯಲ್ಲಿ ನಿರಂತ ಸುರಿದ ಮಳೆ ಪರಿಣಾಮ ಸುಮಾರು 4,574 ಹೆಕ್ಟೇರ್ನಲ್ಲಿರುವ 725 ಹೆಕ್ಟೇರ್ಗೂ ಹೆಚ್ಚು ಅಡಕೆ ತೋಟ ಕೊಳೆರೋಗಕ್ಕೆ ತುತ್ತಾಗಿದೆ. ಸುಮಾರು 48 ರೈತರ 56 ಎಕರೆಗೂ ಹೆಚ್ಚು ಬತ್ತದ ಬೆಳೆ ನಾಶವಾಗಿದೆ ಎಂದು ತೋಟಗಾರಿಕೆ ಮತ್ತು ಕೃಷಿ ಇಲಾಖೆ ಅಧಿಕಾರಿಗಳ ವರದಿಯೇ ತಿಳಿಸಿದೆ.
ಸ್ಥಳಪರಿಶೀಲನೆ: ಆದರೆ ವಾಸ್ತವವಾಗಿ ಇದಕ್ಕೂ ಹೆಚ್ಚಿನ ಬೆಳೆಹಾನಿ ಸಂಭವಿಸಿದ್ದು ಸಂಬಂಧಿಸಿದ ಅಧಿಕಾರಿಗಳು ಸ್ಥಳಪರಿಶೀಲನೆ ನಡೆಸಿ ನಷ್ಟದ ಪ್ರಮಾಣ ಅಂದಾಜು ಸಿದ್ಧಪಡಿಸಿ ಹೆಚ್ಚಿನ ಪರಿಹಾರ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಭದ್ರಾವತಿ ತಾಲೂಕು ಕೂಡಾ ಶಿವಮೊಗ್ಗ ಜಿಲ್ಲೆಗೆ ಒಳಪಟ್ಟಿದ್ದು, ತಾಲ್ಲೂಕಿನಲ್ಲಿ ಉಂಟಾಗಿರುವ ಅತಿವೃಷ್ಟಿಯನ್ನು ವೀಕ್ಷಿಸಿ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣವೇ ತಾಲೂಕಿಗೆ ಭೇಟಿ ನೀಡಬೇಕು ಎಂದು ಬಿಜೆಪಿ ಭದ್ರಾವತಿ ಘಟಕವು ಒತ್ತಾಯಿಸಿದೆ.
ಮನವಿ ಸಲ್ಲಿಸುವ ಸಮಯದಲ್ಲಿ ಸ್ಥಳೀಯ ಘಟಕದ ಅಧ್ಯಕ್ಷ ಮಂಜುನಾಥ್, ಎಂ.ಎಸ್. ಸುರೇಶಪ್ಪ, ಎಸ್.ಬಿ. ಶಿವಾಜಿರಾವ್ ಸಿಂಧ್ಯ, ಬಿ.ಕೆ. ಶ್ರೀನಾಥ್, ಚನ್ನೇಶ್, ಸಚ್ಚಿದಾನಂದ, ಆರ್.ಎಸ್. ಶೋಭ, ಕರುಣಾಕರನ್, ಜಿ. ಆನಂದಕುಮಾರ್ ಮೊದಲಾದರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

