ದೇವಾಲಯಗಳ ಸುತ್ತ ಸ್ವಚ್ಛತೆ ಕಾಪಾಡಲು ಮನವಿ
ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಪುರಾತನ ದೇವಾಲಯಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡುವಂತೆ ಈ ಭಾಗದ ಗ್ರಾಮಸ್ಥರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.
ಈ ಸಂಬಂಧ ಅಪರ ಜಿಲ್ಲಾಧಿಕಾರಿ ಬಾಲಚಂದ್ರ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.
ಜಿಲ್ಲೆಯ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹಿರೇಖಾನ್ ಮಠ, ಗಾಳಿ ಕೆರೆ ಸೇರಿದಂತೆ ಹಲವು ದೇವಾಲಯಗಳಿವೆ. ಈ ಸ್ಥಳಗಳಿಗೆ ಪುರಾತನ ಇತಿಹಾಸವಿದ್ದು, ಇಲ್ಲಿನ ಭಕ್ತರು ಗೌರವದಿಂದ ಕಾಣುತ್ತಿದ್ದಾರೆ.
ಆದರೆ, ಇತ್ತೀಚಿಗ ದಿನಗಳಲ್ಲಿ ಈ ಪ್ರದೇಶಕ್ಕೆ ಹೆಚ್ಚು ಪ್ರವಾಸಿಗರು ಆಗಮಿಸಿದ್ದು, ಇಲ್ಲಿನ ಪವಿತ್ರ ದೇವಾಲಯಗಳ ಮಹಿಮೆಯನ್ನು ಅರಿಯದೆ ಭಕ್ತರ ಮನ ನೋವಿಸುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಅಬ್ಬರದ ಸಂಗೀತವನ್ನು ಹಾಕಿಕೊಂಡು ದೇವಸ್ಥಾನದ ಮುಂಭಾಗದಲ್ಲಿಯೇ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಜತೆಗೆ ಮದ್ಯದ ಬಾಟಲಿಗಳು, ಪ್ಲಾಸ್ಟಿಕ್ ಕವರ್ಗಳಲ್ಲಿ ತಂದ ಆಹಾರವನ್ನು ತಿಂದು ಅಲ್ಲಿಯೇ ಎಸೆದು ಹೋಗುತ್ತಿದ್ದಾರೆ. ಎಸೆದ ಪ್ಲಾಸ್ಟಿಕ್ ಕವರ್ಗಳನ್ನು ತಿಂದು ಅನೇಕ ಹಸುಗಳು ಸತ್ತು ಹೋಗಿವೆ.
ಮದ್ಯದ ಅಮಲಿನಲ್ಲಿರುವ ಪ್ರವಾಸಿಗರಿಗೆ ಇದರ ಬಗ್ಗೆ ಅರಿವೇ ಇರುವುದಿಲ್ಲ. ಇದರಿಂದ ಭಕ್ತರಿಗೆ ತುಂಬಾ ತೊಂದರೆಯಾಗುತ್ತಿದೆ. ಸುಂದರ ಪರಿಸರದಲ್ಲಿರುವ ಈ ದೇವಾಲಯಗಳ ಸುತ್ತ ಮುತ್ತ ಶಾಂತಿ ಹಾಗೂ ಸ್ವಚ್ಛತೆ ಕಾಪಾಡಬೇಕೆಂದು ಆಗ್ರಹಿಸಿದ್ದಾರೆ.
ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಮಂಜುನಾಥ್, ಮನುಕುಮಾರ್, ಶಿವಶಂಕರಯ್ಯ, ಶಾಂತಕುಮಾರ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

