ಪರೀಕ್ಷಾಪೂರ್ವ ತರಬೇತಿ ಶಿಬಿರ
ಶಿವಮೊಗ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 2013-14ನೇ ಸಾಲಿನಲ್ಲಿ ಕೇಂದ್ರ ಲೋಕಸೇವಾ ಆಯೋಗವು ನಡೆಸಲು ಉದ್ದೇಶಿಸಿರುವ ಅಖಿಲ ಭಾರತ ನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲು ಉದ್ಧೇಶಿಸಿದೆ. ಅರ್ಹರ ಆಯ್ಕೆಗಾಗಿ ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆಗಸ್ಟ್ 25ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಗಳ ವಿವರ, ಸೂಚನೆ ಹಾಗೂ ಮತ್ತಿತರ ವಿವರಗಳಿಗಾಗಿ ಅಂತರ್ಜಾಲ ತಾಣ ಢಿಢಿಢಿ.್ಞಛ್ಛಿಢಿಜ.್ಝಟಿವನ್ನು ವೀಕ್ಷಿಸುವಂತೆ ಅಥವಾ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬಸವಚೇತನ ಕಾಂಪ್ಲೆಕ್ಸ್, ರವೀಂದ್ರನಗರ, ನೂರಡಿ ರಸ್ತೆ, ಶಿವಮೊಗ್ಗ, ದೂ-08182 -222129ನ್ನು ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಖ್ಯ ಮಂತ್ರಿ ಬಳಿ ನಿಯೋಗ
ಶಿರಾಳಕೊಪ್ಪ: ತಾಲೂಕಿನಲ್ಲಿ ಇತ್ತೀಚೆಗೆ ಬಿದ್ದ ಮಳೆಯಿಂದ ಸಾಕಷ್ಟು ಅನಾಹುತ ಸಂಭವಿಸಿ ರೈತರ ಸಾಕಷ್ಟು ಬೆಳೆಗಳು ಹಾನಿ ಆಗಿರುವದರಿಂದ ಜಿಲ್ಲಾ ಕಿಸಾನ್ ಶೆಲ್ ಆಶ್ರಯದಲ್ಲಿ ರೈತರ ನಿಯೋಗ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಆಗಲಿದೆ.
24 ರಂದು ಮುಖ್ಯ ಮಂತ್ರಿಗಳು ಶಿವಮೊಗ್ಗ ಜಿಲ್ಲಾ ಕಿಸಾನ್ ಶೆಲ್ ಘಟಕಕ್ಕೆ ಅನುಮತಿ ನೀಡಿದ್ದು, ಜಿಲ್ಲಾ ಕಿಸಾನ್ ಶೆಲ್ ಅಧ್ಯಕ್ಷ ನಗರದ ಮಹದೇವಪ್ಪನವರ ನೇತೃತ್ವದಲ್ಲಿ ರೈತರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿದ್ದಾರೆ. ಭೇಟಿ ಸಂದರ್ಭದಲ್ಲಿ ತಾಲೂಕಿನಲ್ಲಿ ಮಳೆಯಿಂದ ಆದ ಹಾನಿ ಬಗ್ಗೆ ರೈತರು ಮುಖ್ಯ ಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಿದ್ದಾರೆ ಎಂದು ಜಿಲ್ಲಾ ಅಧ್ಯಕ್ಷ ನಗರದ ಮಹದೇವಪ್ಪ ತಿಳಿಸಿದ್ದಾರೆ.
ಸುಜುಕಿ ಎಸ್ಟೀಮ್ ಕಾರು ಹರಾಜು
ಭದ್ರಾವತಿ: ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ವಾರಸುದಾರರು ಪತ್ತೆಯಾಗದ ಸುಜುಕಿ ಎಸ್ಟೀಮ್ ಕಾರು ಸಂಖ್ಯೆ ಎಂ.ಎಚ್.02-ಎಂ-6312 ವಾಹನವನ್ನು ಹರಾಜು ಪ್ರಕ್ರಿಯೆ ನಡೆಸಿ, ಸರ್ಕಾರಕ್ಕೆ ಹಣ ಸಂದಾಯ ಮಾಡಲು ನ್ಯಾಯಾಲಯ ಅನುಮತಿ ನೀಡಿದೆ. ಅದರಂತೆ ಸದರಿ ವಾಹನವನ್ನು ಆ.28ರಂದು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಹರಾಜು ಪ್ರಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ. ಸಾರ್ವಜನಿಕರು ಈ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಿ ವಾಹನವನ್ನು ಪಡೆಯಬಹುದಾಗಿದೆ ಎಂದು ನ್ಯೂಟೌನ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅವರ ಪ್ರಕಟಣೆ ತಿಳಿಸಿದೆ.
ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ: ಆಕ್ರೋಶ
ಶಿವಮೊಗ್ಗ: ಮೆಸ್ಕಾಂ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಗೃಹೋಪಯೋಗಿ ವಸ್ತುಗಳು ಸುಟ್ಟುಹೋಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಹುಡ್ಕೋ ಕಾಲೋನಿ ನಾಗರಿಕರ ಹೋರಾಟ ಸಮಿತಿ ನೇತೃತ್ವದಲ್ಲಿ ಗುರುವಾರ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಯಿತು. ವಿನೋಬ ನಗರ ಹುಡ್ಕೋ ಕಾಲೋನಿಯಲ್ಲಿ ಬುಧವಾರ ಸಂಜೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಿದ್ದರಿಂದ ಸುಮಾರು 60ಕ್ಕೂ ಹೆಚ್ಚಿನ ಮನೆಗಳ ಎಲೆಕ್ಟ್ರಾನಿಕ್ ಉತ್ಪನ್ನಗಳು ಸುಟ್ಟುಹೋಗಿದೆ. ಈ ಕುರಿತು ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕೂಡಲೇ ಮೇಲಾಧಿಕಾರಿಗಳು ಸ್ಥಳಕ್ಕೆ ಭೇಟಿನೀಡಿ ಪರಿಸ್ಥಿತಿಯ ಗಂಭೀರತೆ ಅರಿಯಬೇಕು, ಮುಂದೆ ಇಂತಹ ಘಟನೆ ನಡೆಯದಂತೆ ನೋಡಿಕೊಳ್ಳಬೇಕೆಂದು ಒತ್ತಾಯಿಸಲಾಯಿತು. ಪ್ರತಿಭಟನೆಯಲ್ಲಿ ನಗರಸಭಾ ಸದಸ್ಯ ಮಾಲತೇಶ್, ಬಳ್ಳೆಕೆರೆ ಸಂತೋಷ್, ಗಿರೀಶ್, ಪ್ರವೀಣ್ ಕುಮಾರ್, ನಾಗರಾಜ್, ರವಿ, ಗಣೇಶ್ ಭಟ್ ಮೊದಲಾದವರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

