ಶಿವಮೊಗ್ಗ

ರಸ್ತೆ ವಿಸ್ತರಣೆಗೆ ಆಗ್ರಹ

Published On :

ಕ.ಪ್ರ.ವಾರ್ತೆ  ಸಾಗರ  ಆ.22
ಪಟ್ಟಣದ ಸೊರಬ ರಸ್ತೆಯ ವಿಸ್ತರಣೆ ಕಾಮಗಾರಿಯನ್ನು ತಕ್ಷಣ ಕೈಗೆತ್ತಿಕೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಪಟ್ಟಣದ ಸೊರಬ ರಸ್ತೆ ಅತಿಹೆಚ್ಚು ಜನಸಂದಣಿಯಿಂದ ಕೂಡಿದ್ದು, ವಿಸ್ತರಣೆ ಮಾಡುವ ಕುರಿತು ಹಿಂದಿನಿಂದಲೂ ಚರ್ಚೆ ನಡೆಯುತ್ತಿದೆ. ಈಗಿನ ರಸ್ತೆ ಅತ್ಯಂತ ಕಿರಿದಾಗಿದ್ದು, ವಾಹನ ಸಂಚಾರ, ಪಾದಚಾರಿಗಳು ಓಡಾಡಲು ಸಮಸ್ಯೆ ಉಂಟಾಗುತ್ತಿದೆ. ರಸ್ತೆಯ ಅಕ್ಕಪಕ್ಕದ ಅಂಗಡಿ ಮಾಲೀಕರು ಪಾದಚಾರಿಗಳು ಓಡಾಡುವ ಜಾಗವನ್ನು ಅತಿಕ್ರಮಿಸಿಕೊಂಡಿದ್ದಾರೆ ಎಂದು ಮನವಿಯಲ್ಲಿ ದೂರಲಾಗಿದೆ.  
ಈಗಾಗಲೇ ರಸ್ತೆ ಅಗಲೀಕರಣಕ್ಕೆ ಸಂಬಂಧಪಟ್ಟಂತೆ ಮಾರ್ಕಿಂಗ್ ಸಹ ಮಾಡಲಾಗಿದೆ. ಮಾರ್ಕಿಂಗ್ ಮಾಡಿ ವರ್ಷ ಕಳೆದರೂ ಅಗಲೀಕರಣ ಕುರಿತು ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಪಟ್ಟಣದ ಬಿ.ಎಚ್.ರಸ್ತೆಯ ಶಿವಪ್ಪನಾಯಕ ವೃತ್ತದಿಂದ ಸೊರಬ ರಸ್ತೆಯ ರೈಲ್ವೆಗೇಟ್ ವರೆಗೆ ಅಗಲೀಕರಣ ಕಾಮಗಾರಿಯನ್ನು ತಕ್ಷಣ ಆರಂಭಿಸಬೇಕು. ಇಲ್ಲವಾದರೆ ರಸ್ತೆತಡೆ ನಡೆಸಿ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಲಾಗಿದೆ. ದಲಿತ ಸಂಘರ್ಷ ಸಮಿತಿಯ ಪರಮೇಶ್ವರ ದೂಗೂರು, ನಾಗರಾಜಸ್ವಾಮಿ, ಪುರುಷೋತ್ತಮ, ಮಂಜುನಾಥ ಕೆರೆಕೊಪ್ಪ, ಪ್ರಕಾಶ್ ಎಸ್.ಸಿ., ಟಿ.ವಿ. ಮಲ್ಲೇಶಪ್ಪ ಹಾಜರಿದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.