ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ
ಕ.ಪ್ರ.ವಾರ್ತೆ, ಶಿವಮೊಗ್ಗ, ಆ.23
ಮಾಚೇನಹಳ್ಳಿ ಜಯಂತಿ ಗ್ರಾಮದ ಕೆಎಸ್‌ಆರ್‌ಪಿ ಶಾಲಾ ಮೈದಾನದಲ್ಲಿ ಏರ್ಪಡಿಸಲಾಗಿದ್ದ ನಿದಿಗೆ-ಬಿ ಬೀರನಹಳ್ಳಿ ವಲಯ ಮಟ್ಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ 14ವರ್ಷ ವಯೋವುತಿಯೊಳಗಿನ ಬಾಲಕ- ಬಾಲಕಿಯರ ಕ್ರೀಡಾಕೂಟ ಶುಕ್ರವಾರ ಆರಂಭಗೊಂಡಿತು.
ಜಿಪಂ, ತಾಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ಬಿದರೆ ಗ್ರಾಪಂ ಹಾಗೂ ಜಯಂತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಂಯುಕ್ತ ಆಶ್ರಯದಲ್ಲಿ ಆಯೋಜನೆಗೊಂಡ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ, ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಕ್ರೀಡೆಗಳು ಸಹಕಾರಿಯಾಗಿವೆ ಎಂದರು.
ಉತ್ತಮ ಆರೋಗ್ಯಕ್ಕಾಗಿ ಕ್ರೀಡೆ: ಮಕ್ಕಳಿಗೆ ಪಠ್ಯ ಚಟುವಟಿಕೆಗಳು ಬೌದ್ಧಿಕ ವಿಕಾಸಕ್ಕೆ ಸಹಕಾರಿಯಾದರೆ, ಆಟೋಟ, ಪಠ್ಯೇತರ ಚಟುವಟಿಕೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಪೂರಕವಾಗಿವೆ. ಅಂತೆಯೇ ಮನುಷ್ಯ ಸದಾ ಕ್ರಿಯಾಶೀಲನಾಗಿರಲು ಹಾಗೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ನಿಯಮಿತವಾಗಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದು ಉತ್ತಮ ಎಂದರು.
ಕ್ರೀಡೆಯಲ್ಲಿ ಭಾಗವಹಿಸಿರುವ ಎಲ್ಲಾ ಕ್ರೀಡಾಪಟುಗಳು ವಿಜಯಿಗಳಾಗುವುದು ಸಾಧ್ಯವಿಲ್ಲ. ಕ್ರೀಡೆಯಲ್ಲಿ ವಿಜಯಿಗಳಾದವರು ಇನ್ನಷ್ಟು ಎತ್ತರಕ್ಕೆ ಬೆಳೆದು ಜಿಲ್ಲೆಗೆ ಕೀರ್ತಿ ತರುವಂತವರಾಗಬೇಕು. ಸೋತವರು ಮುಂದಿನ ದಿನಗಳಲ್ಲಿ ಇನ್ನಷ್ಟು ಪೂರ್ವ ತಯಾರಿಯೊಂದಿಗೆ ಸ್ಪರ್ಧೆಗಳಲ್ಲಿ ಭಾಗವಹಿಸಿ, ವಿಜಯಿಗಳಾಗಬೇಕು. ಬಹುಮಾನಕ್ಕಿಂತ ಮುಖ್ಯವಾಗಿ ಎಲ್ಲರಲ್ಲೂ ಸ್ಪರ್ಧಾ ಮನೋಭಾವನೆ ಇರಬೇಕು ಎಂದರು.
ಉತ್ತಮ ವೇದಿಕೆ: ಎಲ್ಲಾ ಮಕ್ಕಳಲ್ಲೂ ಒಂದೊಂದು ರೀತಿಯ ಪ್ರತಿಭೆ ಇರುತ್ತದೆ. ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಕ್ರೀಡಾಕೂಟ ಉತ್ತಮ ವೇದಿಕೆಯಾಗಿವೆ ಎಂದು ತಿಳಿಸಿದರು.
ಗ್ರಾಪಂ ಅಧ್ಯಕ್ಷೆ ಶಾಂತಮ್ಮ ಲಕ್ಷ್ಮಣಪ್ಪ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯ ಕೆ.ಬಿ. ಅಶೋಕನಾಯ್ಕ, ಕೆ.ಎಸ್.ಆರ್.ಪಿ. ಕಮಾಂಡೆಂಟ್ ನಾಗಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಕಮಲಾಕರ್, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಬಾಲಕೃಷ್ಣ, ಗ್ರಾಪಂ ಮಾಜಿ ಅಧ್ಯಕ್ಷ ಎಂ. ಮಾಯಣ್ಣ, ಸಮಾಜಸೇವಾ ಕಾರ್ಯಕರ್ತ ಸುರೇಶ್, ಗಿರಿಜಮ್ಮ, ಶಾಲಾ ಮುಖ್ಯೋಪಾಧ್ಯಾಯರಾದ ಚೆಲ್ಲಮ್ಮ ಮುಂತಾದವರು ಉಪಸ್ಥಿತರಿದ್ದರು.
ಕ್ರೀಡಾಕೂಟದಲ್ಲಿ ನಿದಿಗೆ-ಬಿ ಬೀರನಹಳ್ಳಿ ವಲಯದ ವ್ಯಾಪ್ತಿಗೆ ಒಳಪಡುವ 23ಶಾಲೆಗಳ 750ಕ್ಕೂ ಹೆಚ್ಚಿನ ಕ್ರೀಡಾಪಟುಗಳು ಹಾಗೂ 31 ದೈಹಿಕ ಶಿಕ್ಷಣ ನಿರ್ದೇಶಕರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

