ರಕ್ಷಾಬಂಧನದಿಂದ ದೇಶ ಕಾಯುವ ಸಂಕಲ್ಪ
ಸಾಗರ: ದೇಶವು ಆಂತರಿಕ ಅಭದ್ರತೆಯಿಂದ ಬಳಲುತ್ತಿರುವ ಈ ಸಂದರ್ಭದಲ್ಲಿ ರಕ್ಷಾಬಂಧನದ ಮೂಲಕ ನಾವು ಎಂತಹ ಸಂದರ್ಭ ಬಂದರೂ ವಿಮುಖರಾಗದೆ ದೇಶವನ್ನು ಕಾಯುವ ಸಂಕಲ್ಪ ಮಾಡಬೇಕು ಎಂದು ರಾಷ್ಟ್ರೋತ್ಥಾನ ಬಳಗದ ಅಧ್ಯಕ್ಷ ಎಸ್.ಆರ್. ಭಟ್ ಭಡ್ತಿ ಹೇಳಿದರು.
ಇಲ್ಲಿನ ರಾಷ್ಟ್ರೋತ್ಥಾನ ಬಳಗ ಮತ್ತು ಸರ್ವಹಿತ ಟ್ರಸ್ಟ್ ವತಿಯಿಂದ ಹಿಂದುಳಿದ ವರ್ಗ ವಿದ್ಯಾರ್ಥಿನಿಲಯದಲ್ಲಿ ಸ್ವಾಮಿ ವಿವೇಕಾನಂದರ 150ನೇ ಜನ್ಮ ವರ್ಷಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ರಕ್ಷಾಬಂಧನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆತ್ಮಸ್ಥೈರ್ಯ ತುಂಬಿ: ಗಡಿಯಲ್ಲಿ ಚೀನಾ, ಪಾಕಿಸ್ತಾನ ದೇಶಗಳು ನಮ್ಮ ಯೋಧರನ್ನು ಹಿಮ್ಮೆಟ್ಟಿಸಿ ಗಡಿಯನ್ನು ಅತಿಕ್ರಮಿಸುವ ಕೆಲಸ ಮಾಡುತ್ತಿವೆ. ಆದರೆ ಕೆಚ್ಚೆದೆಯ ಭಾರತೀಯ ಯೋಧರು ತಮ್ಮ ಜೀವದ ಹಂಗು ತೊರೆದು ದೇಶರಕ್ಷಣೆ ಕಾರ್ಯವನ್ನು ಯಶಸ್ವಿಯಾಗಿ ಮಾಡುತ್ತಿದ್ದಾರೆ. ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ನಾವು ಮಾಡಬೇಕು ಎಂದು ಕರೆ ನೀಡಿದರು.
ಸರ್ವಹಿತ ಟ್ರಸ್ಟಿನ ಕ್ಷೇತ್ರ ಪ್ರಚಾರಕ ರಾಜೇಶ್, ಭಾರತ ದೇಶದ ತ್ಯಾಗ, ಆಧ್ಯಾತ್ಮದ ಸಾರವನ್ನು ವಿಶ್ವಕ್ಕೆ ಸಾರಿದ ಮಹಾನ್ ವ್ಯಕ್ತಿ ಸ್ವಾಮಿ ವಿವೇಕಾನಂದರು. ಯುವಜನರು ವಿವೇಕಾನಂದರ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.
ವಸತಿ ನಿಲಯದ ಮೇಲ್ವಿಚಾರಕ ಲಕ್ಷ್ಮೀನಾರಾಯಣ ಮತ್ತಿತತರರು ಈ ಸಂಕರ್ಭದಲ್ಲಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

