ಶಿವಮೊಗ್ಗ

ಪರಿಹಾರಕ್ಕೆ ಆಗ್ರಹಿಸಿ ಮನವಿ

Published On :

ಶಿವಮೊಗ್ಗ: ಕೊಳೆರೋಗ ಭಾದೆಯಿಂದ ಆರ್ಥಿಕ ಸಂಕಷ್ಟಕ್ಕೆ ಈಡಾಗಿರುವ ಅಡಕೆ ಬೆಳೆಗಾರರಿಗೆ ಸೂಕ್ತ ಪರಿಹಾರ ಮಂಜೂರು ಮಾಡುವಂತೆ ಜಿಲ್ಲಾ ಅಡಕೆ ಬೆಳೆಗಾರರ ಸಂಘ ಸರ್ಕಾರವನ್ನು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಅರ್ಪಿಸಿತು.
 ಜಿಲ್ಲೆಯ ಸುಮಾರು 45 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಅಡಕೆ ಬೆಳೆಯುತ್ತಿದ್ದು, ಇದನೇ ನಂಬಿ ಲಕ್ಷಾಂತರ ಜನರು ಜೀವನ ನಡೆಸುತ್ತಿದ್ದಾರೆ. ಆದರೆ, ಕಳೆದ ಮೂರು ತಿಂಗಳಿಂದ ಎಡೆಬಿಡದೆ ಸುರಿಯುತ್ತಿರುವ ಬಾರಿ ಮಳೆಯಿಂದ ಅಡಕೆ ಬೆಳೆಗೆ ಕೊಳೆ, ಹಳದಿ ರೋಗ ತಗುಲಿದ್ದು, ಶೇ.80ರಷ್ಟು ಬೆಳೆ ನಾಶವಾಗಿದೆ. ಇದರಿಂದ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಸರ್ಕಾರ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ಸಂಘ ಒತ್ತಾಯಿಸಿದೆ.  ರೋಗ ಪೀಡಿತ ತೋಟಕ್ಕೆ ಕೇಂದ್ರ, ರಾಜ್ಯ ಸರ್ಕಾರದ ಅನುದಾನದಡಿಯಲ್ಲಿ 25 ಸಾವಿರ ರುಪಾಯಿ ಪರಿಹಾರದ ಹಣ ವಿತರಣೆ ಮಾಡಬೇಕು, ತೋಟಗಾರಿಕಾ ಬೆಳೆಗಳಿಗೆ ತಗುಲುವ ಕೀಟ ಮತ್ತು ರೋಗಗಳ ಸಮಗ್ರ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಹೆಕ್ಟೇರ್ ಒಂದಕ್ಕೆ 7.5 ಸಾವಿರ ರುಪಾಯಿ ಹಣವನ್ನು ಏರಿಕೆ ಮಾಡಬೇಕು. ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆಯ ಯಾಂತ್ರಿಕರಣ ಕಾರ್ಯಕ್ರಮದಡಿಯಲ್ಲಿ ಅಡಕೆ ಬೆಳೆಗಾರರಿಗೆ ಅಗತ್ಯವಿರುವ ಪವರ್ ಸ್ಪ್ರೆಯರ್ ಖರೀದಿಸಲು ಹೆಚ್ಚಿನ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಬೇಕು ಎಂದು ಸಂಘಧ ಅಧ್ಯಕ್ಷ. ರಮೇಶ್ ಹೆಗ್ಡೆ ಆಗ್ರಹಿಸಿದ್ದಾರೆ.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.