ಶಿವಮೊಗ್ಗ

ಬತ್ತ ಬೆಳೆ: ಚರ್ಚಾಗೋಷ್ಠಿ

Published On :

ಶಿವಮೊಗ್ಗ: ಬತ್ತದಲ್ಲಿ ಸಮಗ್ರ ಪೀಡೆ ನಿರ್ವಹಣೆ ಕುರಿತ ರೈತ ಕ್ಷೇತ್ರ ಪಾಠಶಾಲೆಯ ರೈತ ವಿಜ್ಞಾನಿಗಳ ಚರ್ಚಾಗೋಷ್ಠಿಯನ್ನು ನವುಲೆಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು.
   ಅಧ್ಯಕ್ಷತೆ ವಹಿಸಿದ್ದ ಕೃಷಿ ವಿಜ್ಞಾನ ಕೇಂದ್ರದ ಕಾರ್ಯಕ್ರಮ ಸಂಯೋಜಕ ಡಾ. ಬಿ.ಸಿ. ಹನುಮಂತಸ್ವಾಮಿ ಬತ್ತದಲ್ಲಿ ಕೀಟಗಳ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.
  ವಿಷಯ ತಜ್ಞ ಡಾ. ಬಸವರಾಜ್ ಬೀರಣ್ಣವರ್ ರೈತರಿಗೆ ಮಾಹಿತಿ ನೀಡಿದರು. ವಿಷಯ ತಜ್ಞ ಡಾ. ಅಶೋಕ್ ಕೃಷಿ ಜೊತೆ ಪಶುಸಂಗೋಪನೆಯ ಮಹತ್ವ ತಿಳಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ವಿಷಯ ತಜ್ಞ ಡಾ. ಬಿ.ಸಿ. ಧನಂಜಯ ಅವರು ಮಣ್ಣಿನ ಪರೀಕ್ಷೆ ಮಹತ್ವ, ಪೋಷಕಾಂಶಗಳ ಬಳಕೆ ಕುರಿತು ಮಾಹಿತಿ ತಿಳಿಸಿದರು.    ಸಂಪನ್ಮೂಲ ವ್ಯಕ್ತಿ ಡಾ. ಕೆ.ಆರ್. ಶ್ರೀನಿವಾಸ ಅವರು ಬತ್ತದಲ್ಲಿ ಬರುವ ಪ್ರಮುಖ ರೋಗಗಳ ಗುರುತಿಸುವಿಕೆ, ಲಕ್ಷಣ ಮತ್ತು ನಿರ್ವಹಣೆ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಪಿಳ್ಳಂಗಿರಿ ಗ್ರಾಮದ ಸುಮಾರು 25 ರೈತ ಶಿಬಿರಾರ್ಥಿಗಳು ಭಾಗವಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.