ವಿಹಿಂಪ ಮುಖಂಡರ ಬಂಧನಕ್ಕೆ ಖಂಡನೆ
ಶಿವಮೊಗ್ಗ: ಅಯೋಧ್ಯೆಯಲ್ಲಿ ಹಮ್ಮಿಕೊಂಡಿರುವ ಚೌರಾಸಿ ಕೋಸಿ ಪರಿಕ್ರಮ ಯಾತ್ರೆ ನಿಷೇಧಿಸಿ ವಿಶ್ವಹಿಂದು ಪರಿಷತ್ ಮುಖಂಡರನ್ನು ಬಂಧಿಸಿರುವ ಉತ್ತರ ಪ್ರದೇಶ ಸರ್ಕಾರದ ಕ್ರಮ ಖಂಡಿಸಿ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.
ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೇರಿ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು.
ಹಿಂದೂ ವಿರೋಧಿ ಧೋರಣೆ: ಅಯೋಧ್ಯೆಯಿಂದ ಹಮ್ಮಿಕೊಂಡಿದ್ದ ಧಾರ್ಮಿಕ ಯಾತ್ರೆಯನ್ನು ನಿಷೇಧಿಸಿ ಆದೇಶ ಹೊರಡಿಸಿರುವುದು ಸರಿಯಲ್ಲ. ಯಾತ್ರೆಯಲ್ಲಿ ಪಾಲ್ಗೊಳ್ಳಲು ತೆರಳಿದ್ದ ವಿಹಿಂಪ ಮುಖಂಡ ಪ್ರವೀಣ್ ತೊಗಾಡಿಯಾ ಸೇರಿದಂತೆ ಹಲವು ಸಂತರು, ಮುಖಂಡರನ್ನು ಬಂಧಿಸಿರುವುದು ಹಿಂದು ವಿರೋಧಿ ಧೋರಣೆಯಾಗಿದೆ ಎಂದು ಮುಖಂಡರು ಅಭಿಪ್ರಾಯಪಟ್ಟರು.
ಈ ಕೂಡಲೇ ಉತ್ತರ ಪ್ರದೇಶ ಸರ್ಕಾರವು ಎಲ್ಲಾ ಬಂಧಿತ ನಾಯಕರನ್ನು ಸಾಧುಸಂತರನ್ನು ಬಿಡುಗಡೆ ಮಾಡಬೇಕು, ಯಾತ್ರೆ ಸುಗಮವಾಗಿ ನಡೆಯಲು ಅನುವು ಮಾಡಿಕೊಡಬೇಕು. ಅಲ್ಪಸಂಖ್ಯಾತರನ್ನು ಓಲೈಸುವ ಪ್ರವೃತ್ತಿ ಕೈಬಿಡಬೇಕೆಂದು ಒತ್ತಾಯಿಸಿದರು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ವಿಹಿಂಪದ ರಮೇಶ್ ಬಾಬು, ಬಜರಂಗದಳ ಜಿಲ್ಲಾ ಸಂಚಾಲಕ ದೀನದಯಾಳು, ಪ್ರಮುಖರಾದ ಗಿರೀಶ್ ಪಟೇಲ್, ಜ್ಞಾನೇಶ್ವರ್, ಎಸ್.ದತ್ತಾತ್ರಿ, ಚನ್ನಬಸಪ್ಪ, ಅಣ್ಣಪ್ಪ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

