ಶಿವಮೊಗ್ಗ

ಗೋ ಹತ್ಯೆ ಮಸೂದೆ ಹಿಂಪಡೆಯುವಂತೆ ಇಂದು ಬಿಜೆಪಿ ಹೋರಾಟ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ಆ.27 ಗೋ ಹತ್ಯೆ ನಿಷೇಧ ಮಸೂದೆ ತಿದ್ದುಪಡಿ ಹಿಂದಕ್ಕೆ ಪಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ಹಮ್ಮಿಕೊಂಡಿದೆ.
ಬಿಜೆಪಿ ಸರ್ಕಾರ ವಿಧಾನಮಂಡಲದಲ್ಲಿ ಅಂಗೀಕಾರ ಪಡೆದು ರಾಜ್ಯಪಾಲರ ಅನುಮತಿಗಾಗಿ ಕಳುಹಿಸಿದ್ದ ಗೋ ಹತ್ಯೆ ನಿಷೇಧ ಮಸೂದೆಯನ್ನು ಈಗಿನ ಕಾಂಗ್ರೆಸ್ ಸರ್ಕಾರವು ಏಕಾಏಕಿ ಹಿಂಪಡೆಯುತ್ತಿರುವುದರ ವಿರುದ್ಧ ಶಿವಮೊಗ್ಗ ನಗರ ಹಾಗೂ ಶಿವಮೊಗ್ಗ ಗ್ರಾಮಾಂತರ ಬಿಜೆಪಿ ವತಿಯಿಂದ ಸೆ.28ರಂದು ಜಿಲ್ಲಾಧಿಕಾರಿ ಕಚೇರಿ  ಮುಂಭಾಗದಲ್ಲಿ ಬೃಹತ್ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.
ಪ್ರತಿಭಟನಾ ಸಭೆಯಲ್ಲಿ ಶಿವಮೊಗ್ಗ ನಗರ ಬಿಜೆಪಿ ಅಧ್ಯಕ್ಷ ಎಸ್. ಜ್ಞಾನೇಶ್ವರ್, ಶಿವಮೊಗ್ಗ ಗ್ರಾಮಾಂತರ ಅಧ್ಯಕ್ಷ ಎನ್.ಜಿ. ರುದ್ರೇಶ್ ಗೌಡ ಹಾಗೂ ಜಿಲ್ಲಾ ಪದಾಧಿಕಾರಿಗಳು, ಮುಖಂಡರುಗಳು ಭಾಗವಹಿಸಲಿದ್ದಾರೆ.
ಸಭೆಗೆ ಶಿವಮೊಗ್ಗ ನಗರ, ಗ್ರಾಮಾಂತರದ ಪಕ್ಷದ ಎಲ್ಲಾ ಕಾರ್ಯಕರ್ತರು, ಹಿತೈಷಿಗಳು, ಜನ ಪ್ರತಿನಿಧಿಗಳು, ರೈತರು, ಕೃಷಿ ಕಾರ್ಮಿಕರು, ಸಾರ್ವಜನಿಕರು ಭಾಗವಹಿಸುವಂತೆ ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ಜಿ. ನಾಗರಾಜ್, ಎಸ್.ಎಸ್. ನಂಜುಂಡಸ್ವಾಮಿ, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಟಿ. ಈಶ್ವರಪ್ಪ, ಕುಪೇಂದ್ರ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.