ಸರ್ಕಾರಿ ಕಟ್ಟಡ ನಿರ್ವಹಣೆಗೆ ಒತ್ತು ನೀಡಿ
ಕ.ಪ್ರ.ವಾರ್ತೆ ಶಿವಮೊಗ್ಗ ಆ.27
ದೂರ ಮತ್ತು ಅತಿ ಹಿಂದುಳಿದ ಪ್ರದೇಶಗಳ ಅಂಗನವಾಡಿ, ಶಾಲಾ ಕಟ್ಟಡಗಳು ಸೇರಿದಂತೆ ಎಲ್ಲಾ ಸರ್ಕಾರಿ ಕಟ್ಟಡಗಳ ಸಮರ್ಪಕ ನಿರ್ವಹಣೆಗೆ ಒತ್ತು ನೀಡುವಂತೆ ಜಿಲ್ಲಾಧಿಕಾರಿ ವಿಪುಲ್ ಬನ್ಸಾಲ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದೂರ ಮತ್ತು ಅತಿ ಹಿಂದುಳಿದ ಪ್ರದೇಶಾಭಿವೃದ್ಧಿ ಸಮಿತಿ ಸಭೆ ನಡೆಸಿದ ಅವರು, ತೀರ್ಥಹಳ್ಳಿ, ಹೊಸನಗರ ಭಾಗಗಳಲ್ಲಿ ಸರ್ಕಾರಿ ಕಟ್ಟಡವು ಸುಸ್ಥಿತಿಯಲ್ಲಿಲ್ಲದಿರುವ ಬಗ್ಗೆ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ದೂರ ಮತ್ತು ಅತಿ ಹಿಂದುಳಿದ ಪ್ರದೇಶಗಳನ್ನು ಎಲ್ಲಾ ಸರ್ಕಾರಿ ಕಟ್ಟಡಗಳನ್ನು ಸುಸ್ಥಿತಿಯಲ್ಲಿಡಬೇಕು ಹಾಗೂ ಅಲ್ಲಿನ ಕಾರ್ಯವೈಖರಿ ಸಮರ್ಪಕ ನಿರ್ವಹಣೆ ಇರಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಮುಂದಿನ ತಿಂಗಳು ವರದಿ ನೀಡಿ: ಮುಂದಿನ ತಿಂಗಳ ಸಭೆಯ ಹೊತ್ತಿಗೆ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ, ಶಾಲಾ ಕಟ್ಟಡ, ಪ್ರಾಥಮಿಕ ಆರೋಗ್ಯ ಕೇಂದ್ರ, ಮತ್ತಿತರ ಸರ್ಕಾರಿ ಕಟ್ಟಡಗಳು ಉತ್ತಮ ಸ್ಥಿತಿಯಲ್ಲಿ ಇರುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಸಮಿತಿಗೆ ವರದಿ ನೀಡಬೇಕೆಂದು ಸೂಚಿಸಿದರು.
ಹಿಂದಿನ ಸಭೆಯಲ್ಲಿ ಚರ್ಚಿಸಿದ ವಿಷಯಗಳಿಗೆ ಸಂಬಂಧಿಸಿದಂತೆ ಕ್ರಿಯಾ ಯೋಜನೆಗಳಿಗೆ ಅನುಮೋದನೆ ಪಡೆಯುವಂತೆ ಸೂಚಿಸಿದ ಅವರು, ಕಾಮಗಾರಿ ಕುರಿತು ಚರ್ಚಿಸುವಾಗ ಮಳೆಯ ನೆಪ ಹೇಳಿ ಸುಮ್ಮನೆ ಕೂರುವುದು ಸರಿಯಲ್ಲ.
ಮಳೆಗಾಲ ಇರುವ ಕಾರಣ ಆಡಳಿತಾತ್ಮಕ ಕೆಲಸಗಳನ್ನು ಪೂರ್ಣಗೊಳಿಸುವುದು. ಮಳೆ ಕಡಿಮೆ ಆದ ನಂತರ ಭೌತಿಕ ಕಾಮಗಾರಿಗಳನ್ನು ಆರಂಭಿಸಬೇಕು. ಅನುಮೋದನೆ ಪಡೆದ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕೆಂದು ತಿಳಿಸಿದರು.
ವಿಷಯ ಮಂಡಿಸಿ: ಕಾಮಗಾರಿ ಕುರಿತು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಖುದ್ದು ಪರಿಶೀಲನೆ ನಡೆಸಲು ಸ್ಥಳಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಸ್ಥಳೀಯರಿಂದ ಬೇರೆ ಇಲಾಖೆಗಳ ಸಂಬಂಧಿತ ಸಮಸ್ಯೆಗಳ ಬಗ್ಗೆ ಮನವಿ ಮಾಡಿದರೆ ಅದು ತಮ್ಮ ಇಲಾಖೆಗೆ ಸಂಬಂಧಿಸದಿದ್ದರೂ ಸಹಾನುಭೂತಿಯಿಂದ ಪರಿಗಣಿಸಿ, ಮುಂದಿನ ಸಭೆಯಲ್ಲಿ ಈ ವಿಷಯವನ್ನು ಮಂಡಿಸಬೇಕು ಎಂದರು.
ಕಳೆದ ಸಭೆಯಲ್ಲಿ ಅನುಮೋದಿಸಿದ ಎಲ್ಲಾ ಹೊಸ ಕಾಮಗಾರಿ ಕುರಿತಂತೆ ಅಂದಾಜು ಯೋಜನೆ ಸಲ್ಲಿಸುವ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ ಅವರು, ಈ ಯೋಜನೆಗಳಿಗೆ ಶೀಘ್ರವೇ ಮಂಜೂರು
ನೀಡಲಾಗುವುದು. ಇದರೊಂದಿಗೆ ಬಾಕಿ ಇರುವ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ವೈಯಕ್ತಿಕ ಆಸಕ್ತಿಯೊಂದಿಗೆ ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಚಾರ ನಡೆಸಿ: ಆರೋಗ್ಯ ಶಿಬಿರಗಳು, ಪಶು ಇಲಾಖೆಗೆ ಸಂಬಂಧಿಸಿದ ಶಿಬಿರಗಳನ್ನು ವ್ಯವಸ್ಥಿತವಾಗಿ ವ್ಯಾಪಕ ಪ್ರಚಾರದೊಂದಿಗೆ ನಡೆಸುವಂತೆ ಇಲಾಖಾ ಅಧಿಕಾರಿಗಳಿಗೆ ಬನ್ಸಲ್ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿ ಸಸಿಕಾಂತ್ ಸೆಂಥಿಲ್, ಅಪರ ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ, ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

