ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ
ಕ.ಪ್ರ.ವಾರ್ತೆ ಸೊರಬ ಆ.28
ಕೇವಲ ತಮ್ಮ ಮತ ಬ್ಯಾಂಕನ್ನು ಗಮನದಲ್ಲಿರಿಸಿರುವ ಕಾಂಗ್ರೆಸ್ ಸರ್ಕಾರ ದೇಶದ ಪ್ರಮುಖ ಅಂಗ ಕೃಷಿ ಬದುಕಿಗೆ ಕವಡೆ ಕಿಮ್ಮತ್ತನ್ನೂ ನೀಡುತ್ತಿಲ್ಲ ಎಂದು ಜಿಪಂ ಸದಸ್ಯ ಹುನವಳ್ಳಿ ಗಂಗಾಧರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಬುಧವಾರ ಗೋಹತ್ಯೆ ನಿಷೇಧ ಕಾನೂನು ಹಿಂಪಡೆದಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ತಾಲೂಕು ಘಟಕ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದರು.
ಕೃಷಿ ಬೆನ್ನೆಲುಬು ಗೋವು, ಈಗಾಗಲೇ ಗೋವುಗಳು ಕಸಾಯಿಖಾನೆಯತ್ತ ಹೊರಟಿರುವ ಪರಿಣಾಮ ಸಹಜ ಕೃಷಿ ಮರೆಯಾಗಿ ರಾಸಾಯನಿಕ ಕೃಷಿಯತ್ತ ಮುಖ ಮಾಡಿರುವುದರಿಂದ ತಾಯಿ ಸ್ಥಾನವಿರಿಸಿ ಪೂಜಿಸುತ್ತಿದ್ದ ಭೂಮಿಯಿಂದು ಬರಡಾಗುತ್ತಿದೆ. ಆಹಾರ ಕೊರತೆ ಎದುರಿಸುವ ದಿನಗಳು ಸನ್ನಿಹಿತವಾಗಿದೆ. ಇಂತಹ ಸಂದರ್ಭದಲ್ಲಿ ಯಾವುದೇ ಸರ್ಕಾರಗಳು ಆಹಾರ ಕೊರತೆ ಉಲ್ಬಣಿಸದಂತೆ ಆಗು ಹೋಗುಗಳ ಬಗ್ಗೆ ಚಿಂತನೆ ನಡೆಸಬೇಕು. ಆದರೆ ಕೇವಲ ಮತಗಳನ್ನು ಗಮನದಲ್ಲಿಟ್ಟು ಆಡಳಿತಕ್ಕೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರಕ್ಕೆ ದೇಶದ ಅಳಿವು ಉಳಿವಿನ ಚಿಂತನೆಯಿಲ್ಲ ಎಂದು ಆರೋಪಿಸಿದರು.
ಸರ್ಕಾರದ ನೀತಿಗೆ ಖಂಡನೆ: ಪ್ರಸ್ತುತ ಹಾಲು ಉತ್ಪಾದನೆಗೆ ಉತ್ತೇಜನ ನೀಡಿ, ಗೋವುಗಳನ್ನು ಕಸಾಯಿಖಾನೆಗೆ ಕಳುಹಿಸಲು ಹಸಿರು ನಿಶಾನೆ ನೀಡಿರುವ ಸರ್ಕಾರದ ನೀತಿ ತೀರಾ ಬೇಸರ ತರುವಂತಾದ್ದು ಎಂದು ಆತಂಕ ವ್ಯಕ್ತಪಡಿಸಿದ ಅವರು, ಸರ್ಕಾರದ ನೀತಿ ವಿರುದ್ಧ ಖಂಡಿಸಿದರು.
ಗೋಹತ್ಯಾ ನಿಷೇಧ ಕಾನೂನು ಜಾರಿಯಾಗಬೇಕು, ಪ್ರಸಕ್ತ ಸಾಲಿನಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಅಡಕೆ, ಬತ್ತ, ಶುಂಠಿ, ಜೋಳ ಬೆಳೆಗೆ ಸಮರ್ಪಕ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ಎಚ್.ಎಸ್. ಮಂಜಪ್ಪ, ಪಾಣಿರಾಜಪ್ಪ, ಶ್ರೀಧರಾಚಾರ್, ಶಿವಯೋಗಿ, ಎಯೋಗೇಶ್, ಗಜಾನನರಾವ್, ಶಕ್ತಿ ಕೇಂದ್ರ, ಯುವ ಮೋರ್ಚಾ ಅಧ್ಯಕ್ಷ, ಪದಾಧಿಕಾರಿ, ಸದಸ್ಯರುಗಳು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

