ಪ್ರತಿನಿತ್ಯ ಗ್ರಾಹಕನಿಗೆ ವಂಚನೆ
ಶಿವಮೊಗ್ಗ: ಗ್ರಾಹಕರು ಪ್ರತಿನಿತ್ಯ ಒಂದಲ್ಲ ಒಂದು ರೀತಿಯಲ್ಲಿ ವಂಚನೆಗೊಳಗಾಗುತ್ತಿದ್ದಾರೆ. ಇದಕ್ಕೆ ಜಾಗೃತಿ ಶಿಕ್ಷಣದ ಕೊರತೆಯೇ ಕಾರಣ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಶಂಕರಪ್ಪ ಹೇಳಿದರು.
ಡಿವಿಎಸ್ ಸ್ವಾತಂತ್ರ್ಯ ಪದವಿ ಪೂರ್ವ ಕಾಲೇಜು ಹಾಗೂ ಬಳಕೆದಾರರ ವೇದಿಕೆ ಆಶ್ರಯದಲ್ಲಿ ಬುಧವಾರ ಡಿವಿಎಸ್ ರಂಗಮಂದಿರದಲ್ಲಿ ಆಯೋಜಿಸಿದ್ದ ಗ್ರಾಹಕ ಜಾಗೃತಿ ಶಿಕ್ಷಣ ಕಾರ್ಯಕ್ರಮದಲ್ಲಿ ಅವರು, ವ್ಯಾಪಾರಿಗಳು ಕೇವಲ ಲಾಭಗಳಿಸುವ ಉದ್ದೇಶ ಹೊಂದಿರುತ್ತಾರೆ. ಹಾಗಾಗಿ ಅವರು ಅವಧಿ ಮೀರಿದ ಆಹಾರ ಪದಾರ್ಥ, ಔಷಧಿ ಸೇರಿದಂತೆ ವಿವಿಧ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದಾರೆ. ಇದ್ದರಿಂದ ಜನರ ಆರೋಗ್ಯದ ಮೇಲೆ ವೈತಿರಿಕ್ತ ಪರಿಣಾಮ ಬೀರುವ ಸಾಧ್ಯಗಳಿರುತ್ತವೆ. ಇದನ್ನು ಮಾರಾಟಗಾರರು ಅರಿತು ವ್ಯಾಪಾರ ಮಾಡಬೇಕು ಎಂದರು.
ಗ್ರಾಹಕರು ಜಾಗೃತರಾಗಿ: ಇಂದು ಜಾಹೀರಾತುಗಳು ಗ್ರಾಹಕರನ್ನು ದಾರಿತಪ್ಪಿಸುತ್ತಿದೆ. ಪ್ರಸಾರವಾಗುವ ಜಾಹೀರಾತುಗಳನ್ನು ನಂಬಿ ಉತ್ಪನ್ನಗಳನ್ನು ಖರೀದಿಸುವ ಗ್ರಾಹಕರು ವಂಚನೆಗೊಳಗಾಗಿರುವುದು ಸಾಕಷ್ಟು ಕಂಡು ಬರುತ್ತಿದೆ. ಇವುಗಳನ್ನು ಕಡಿವಾಣ ಹಾಕಲು ಗ್ರಾಹಕರು ಮೊದಲು ಜಾಗೃತರಾಗಬೇಕು ಎಂದರು.
ಮೊಬೈಲ್ ಮತ್ತು ಈ- ಮೇಲ್ಗಳಿಗೆ ಅನಾಮಿಕ ಸಂದೇಶಗಳು ಬರುತ್ತಿದ್ದು, ಹಲವು ರೀತಿಯ ಆಮಿಷಗಳನ್ನು ಒಡ್ಡಲಾಗಿದೆ. ಇದರ ಅರಿವಿಲ್ಲದೆ ಸಂದೇಶವನ್ನು ನಂಬಿ ಮೋಸ ಹೋಗುತ್ತಿರುವವರ ಸಂಖ್ಯೆ ಕೂಡ ಅಧಿಕವಾಗುತ್ತಿದೆ ಎಂದು ವಿಷಾದಿಸಿದರು. ಪಿ. ರಾಮಕೃಷ್ಣ, ಡಿವಿಎಸ್ ಆಡಳಿತ ಮಂಡಳಿಯ ವ್ಯವಸ್ಥಾಪಕ ಎಚ್.ಎಸ್. ಚಂದ್ರಶೇಖರ್, ಪ್ರಾಧ್ಯಾಪಕ ಎನ್. ಕೃಷ್ಣಮೂರ್ತಿ, ಪ್ರಾಂಶುಪಾಲ ರಂಗನಾಥಯ್ಯ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

