'ಕನಿಷ್ಠ 2 ಗಂಟೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಿ'
ಕ.ಪ್ರ.ವಾರ್ತೆ ಭದ್ರಾವತಿ ಆ.29
ಓದಿನೊಂದಿಗೆ ದಿನಕ್ಕೆ ಕನಿಷ್ಠ 2 ಗಂಟೆ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಜೀವನವನ್ನು ಸಮಗ್ರವಾಗಿಸಿಕೊಳ್ಳಿ, ಇಲ್ಲವಾದರೆ ಜೀವನದಲ್ಲಿ ಕಳೆದುಕೊಂಡುದನ್ನು ಮರಳಿ ಪಡೆಯಲು ಸಾಧ್ಯವಿಲ್ಲ ಎಂದು ಕುವೆಂಪು ವಿ.ವಿ. ಕುಲಸಚಿವ ಪ್ರೊ. ಎ. ರಾಮೇಗೌಡ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಅವರು ಪಟ್ಟಣದ ಸರ್ ಎಂ.ವಿ. ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಗುರುವಾರ ಪ್ರಾರಂಭವಾದ 2 ದಿನಗಳ ಕುವೆಂಪು ವಿ.ವಿ. ಅಂತರ ಕಾಲೇಜು ಪವರ್ ಲಿಫ್ಟಿಂಗ್, ಭಾರ ಎತ್ತುವ ಸ್ಪರ್ಧೆ ಮತ್ತು ದೇಹದಾರ್ಢ್ಯ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು.
ಭಾರತೀಯ ಹಾಕಿ ದಂತಕತೆ ಮೇಜರ್ ಧ್ಯಾನಚಂದ್ ಅವರ ಹುಟ್ಟುಹಬ್ಬದ ಪ್ರಯುಕ್ತ ಭಾರತ ಸರ್ಕಾರ ಆ.29 ರಂದು ರಾಷ್ಟ್ರಾದ್ಯಂತ ಕ್ರೀಡಾ ದಿವಸವನ್ನಾಗಿ ಆಚರಿಸಲು ತೀರ್ಮಾನಿಸಿರುವುದು ಸ್ವಾಗತಾರ್ಹ. ಧ್ಯಾನಚಂದ್ ಅವರಿಗೆ ವಿದೇಶದಿಂದ ಹಾಕಿ ಆಡಲು ಆಹ್ವಾನವಿದ್ದರೂ, ಅದನ್ನು ತಿರಸ್ಕರಿಸಿ ತಮ್ಮ ಪ್ರತಿಭೆಯನ್ನು ತಾಯ್ನಾಡಿಗೆ ಅರ್ಪಿಸುವ ಮನೋಭಾವ ತೋರಿದ ಮಹಾನ್ ವ್ಯಕ್ತಿ ಎಂದು ಬಣ್ಣಿಸಿದರು. ಕುವೆಂಪು ವಿ.ವಿ. ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎಸ್.ಎಂ. ಪ್ರಕಾಶ್ ಕುವೆಂಪು ವಿ.ವಿ. ಪ್ರತಿವರ್ಷ ಅತ್ಯುತ್ತಮ ಕ್ರೀಡಾಪಟುವಿಗೆ ರು. 15,000 ವಿದ್ಯಾರ್ಥಿ ವೇತನವನ್ನೂ ನೀಡುತ್ತಿದೆ ಎಂದು ತಿಳಿಸಿದರು. ರಾಜ್ಯ ಪ್ರಶಸ್ತಿ ವಿಜೇತ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಡಿ. ವೆಂಕಟರಾಮಯ್ಯ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ಪ್ರೊ. ಮೋಹನ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ವಸಂತಕುಮಾರ್ ಸ್ವಾಗತಿಸಿದರು. ಕೆ.ಆರ್.ಸಂಜನಾ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

