ಕೆ.ಎಸ್. ಈಶ್ವರಪ್ಪ ನೀಡಿರುವ ಹೇಳಿಕೆ ಹಿಂಪಡೆಯಲು ಆಗ್ರಹ
ಸಾಗರ: ಕಾಂಗ್ರೆಸ್ ಬಗ್ಗೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ನೀಡಿರುವ ಹೇಳಿಕೆ ಅಸಂಬಂಧವಾಗಿದ್ದು, ಅವರು ತಕ್ಷಣ ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆದು ಕ್ಷಮೆ ಯಾಚಿಸದಿದ್ದರೆ ಪಕ್ಷದ ವತಿಯಿಂದ ಕೆ.ಎಸ್. ಈಶ್ವರಪ್ಪ ಹೋದ ಕಡೆಯೆಲ್ಲಾ ಘೇರಾವು ಹಾಕಲಾಗುವುದು ಎಂದು ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ತೀ.ನ. ಶ್ರೀನಿವಾಸ್ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ, ಹಿಂದಿನ ಬಿಜೆಪಿ ಸರ್ಕಾರ ಐದು ವರ್ಷಗಳಲ್ಲಿ ಮಾಡಿರುವ ಭ್ರಷ್ಟಾಚಾರ, ಗುಂಪುಗಾರಿಕೆ, ಜನವಿರೋಧಿ ಆಡಳಿತದಿಂದಾಗಿ ಬೇಸತ್ತ ಜನರು ಈಶ್ವರಪ್ಪ ಅವರನ್ನು ಮೂಲೆಗೆ ಸೇರಿಸಿದ್ದಾರೆ. ಅಧಿಕಾರ ಕಳೆದುಕೊಂಡರೂ ಅದೇ ಅಮಲಿನಲ್ಲಿರುವ ಈಶ್ವರಪ್ಪ ಕಾಂಗ್ರೆಸ್ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಖಂಡನೀಯ ಎಂದರು.
ಈಶ್ವರಪ್ಪನವರು ಅಧಿಕಾರ ಕಳೆದುಕೊಂಡರೂ ಕೆಂಪು ದೀಪದ ಕಾರು, ಪೊಲೀಸ್ ಪೈಲೆಟ್ ವಾಹನವನ್ನು ಸರ್ಕಾರದಿಂದ ಪಡೆದು ಅನಧಿಕೃತವಾಗಿ ರಾಜ್ಯಾದ್ಯಂತ ಸಂಚಾರ ಮಾಡುತ್ತಿದ್ದಾರೆ. ಇದು ಕಾನೂನು ಬಾಹಿರವಾಗಿದೆ. ಎಲ್ಲಿ ಪೊಲೀಸ್ ಎಸ್ಕಾರ್ಟ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುತ್ತಾರೋ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದು ಎಸ್ಕಾರ್ಟ್ ಉಳಿಸಿಕೊಂಡಿರುವ ಈಶ್ವರಪ್ಪ ಕಾಂಗ್ರೆಸ್ ಪಕ್ಷಕ್ಕೆ ಬುದ್ದಿ ಹೇಳುವ ಅಗತ್ಯವಿಲ್ಲ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎನ್.ಜಿ.ಪೈ ಮಾತನಾಡಿ, ಕೆ.ಎಸ್. ಈಶ್ವರಪ್ಪ ತಮ್ಮ ಸ್ಥಾನಮಾನಕ್ಕೆ ತಕ್ಕಂತೆ ಮಾತನಾಡಬೇಕು. ಹಿಂದೊಮ್ಮೆ ಕಾಗೋಡು ತಿಮ್ಮಪ್ಪನವರ ಬಗ್ಗೆ ಈಶ್ವರಪ್ಪ ಪ್ರಚಾರಪ್ರಿಯರು ಎಂದು ಟೀಕೆ ಮಾಡಿದ್ದರು. ಕಾಗೋಡು ತಿಮ್ಮಪ್ಪನವರು ಕೆಲಸ ಮಾಡಿ ಪ್ರಚಾರಕ್ಕೆ ಬಂದವರೆ ವಿನಾ ಈಶ್ವರಪ್ಪನವರಂತೆ ಭ್ರಷ್ಟಾಚಾರ ಮಾಡಿ ಪ್ರಚಾರ ಪಡೆದಿಲ್ಲ ಎಂದರು.
ತಾ. ಕಾಂಗ್ರೆಸ್ ಅಧ್ಯಕ್ಷ ಕೆ. ಹೊಳೆಯಪ್ಪ, ನಗರ ಘಟಕದ ಅಧ್ಯಕ್ಷ ಮಕ್ಬೂಲ್ ಅಹಮದ್, ಮಹಿಳಾ ಘಟಕದ ಅಧ್ಯಕ್ಷೆ ಎನ್. ಲಲಿತಮ್ಮ, ರಮೇಶ್ ಗಾಳಿಪುರ, ಹಮೀದ್, ತಾರಾಮೂರ್ತಿ, ಸುಂದರಸಿಂಗ್, ಎನ್.ಶ್ರೀನಾಥ್, ರವಿ ಜಂಬಗಾರು, ಗಣಾಧೀಶ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

