ಮತದಾರರ ಪಟ್ಟಿ ಪರಿಷ್ಕರಣೆ
ಶಿವಮೊಗ್ಗ: ನಗರಸಭೆಯು ಚುನಾವಣಾ ಆಯೋಗದ ಸೂಚನೆಯಂತೆ 13-ಶಿವಮೊಗ್ಗ ವಿಧಾನಸಭಾ ಕ್ಷೇತ್ರ ಮತದಾರರ ಪಟ್ಟಿಯ ನಿರಂತರ ಪರಿಷ್ಕರಣೆಗೆ ಕ್ರಮ ಕೈಗೊಂಡಿದೆ. ಮತದಾರರು ಮತದಾರರ ಪಟ್ಟಿಯ ವಿವರಗಳನ್ನು ಆಯೋಗದ ಅಂತರ್ಜಾಲ ತಾಣ ಢಿಢಿಢಿ.್ಛಜ್ಟ್ಞಛ್ಠಟಿಛಡಿಛ್ಞಛ.್ಞಛ್ಠ.ಟ್ಝ್ಛಿ.್ಝಟಿ ಪರಿಶೀಲಿಸಬಹುದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ, ಕೈಬಿಡತಕ್ಕವು ಹಾಗೂ ಮಾರ್ಪಾಡುಗಳ ಬಗ್ಗೆ ನಿಗದಿತ ನಮೂನೆಯಲ್ಲಿ ಆನ್‌ಲೈನ್‌ನಲ್ಲಿ ಅಥವಾ ಸಂಬಂಧಿಸಿದ ಮತಗಟ್ಟೆ ಅಧಿಕಾರಿಗಳಿಗಾಗಲಿ ಅಥವಾ ಶಿವಮೊಗ್ಗ ನಗರಸಭಾ ಕಚೇರಿ ಚುನಾವಣಾ ವಿಭಾಗದಲ್ಲಿಯಾಗಲಿ ಸಲ್ಲಿಸುವಂತೆ ನಗರಸಭಾ ಪೌರಾಯುಕ್ತ ಎಂ. ಕರಭೀಮಣ್ಣನವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಷ್ಟ್ರಪ್ರಶಸ್ತಿಗೆ ಶಿಕ್ಷಕ ರಾಜೇಂದ್ರ
ಬುರಡಿಕಟ್ಟಿ ಆಯ್ಕೆ
ಶಿವಮೊಗ್ಗ: ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಮಂತ್ರಾಲಯವು ತೀರ್ಥಹಳ್ಳಿ ತಾಲೂಕು ಸಾಲೇಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಸಹಶಿಕ್ಷಕ ಡಾ. ರಾಜೇಂದ್ರ ಬುರಡಿಕಟ್ಟಿ ಅವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಅನುಪಮ ಹಾಗೂ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ, 2012ನೇ ಸಾಲಿನ ರಾಷ್ಟ್ರಪ್ರಶಸ್ತಿಗೆ ಆಯ್ಕೆ ಮಾಡಿದೆ.
ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿರುವ ಡಾ. ರಾಜೇಂದ್ರಬುರಡಿಕಟ್ಟಿ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹಾಗೂ ಸಂಘದ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

